ಕೇಂದ್ರ ಸರ್ಕಾರದ ಕೋಟಾದಡಿ 2 ಲಕ್ಷ ಡೋಸ್ ಕೋವಿಶೀಲ್ಡ್ ಬುಧವಾರ ರಾಜ್ಯಕ್ಕೆ ಆಗಮನ: ಡಾ. ಕೆ. ಸುಧಾಕರ್
ಕೇಂದ್ರ ಸರ್ಕಾರದ ಕೋಟಾದಡಿಯಲ್ಲಿ ಬುಧವಾರ 2 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ರಾಜ್ಯಕ್ಕೆ ಬಂದಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
Published: 27th May 2021 01:09 AM | Last Updated: 27th May 2021 02:53 PM | A+A A-

ಡಾ. ಕೆ. ಸುಧಾಕರ್
ಬೆಂಗಳೂರು: ಕೇಂದ್ರ ಸರ್ಕಾರದ ಕೋಟಾದಡಿಯಲ್ಲಿ ಬುಧವಾರ 2 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ರಾಜ್ಯಕ್ಕೆ ಬಂದಿದೆ ಎಂದು
ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಟ್ವಿಟರ್ ನಲ್ಲಿ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿರುವ ಡಾ. ಕೆ. ಸುಧಾಕರ್, ಕೇಂದ್ರದಿಂದ ಒಟ್ಟು 1.07 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದಿರುವುದಾಗಿ ತಿಳಿಸಿದ್ದಾರೆ.
ರಾಜ್ಯವು ನೇರವಾಗಿ 13.54 ಲಕ್ಷ ಡೋಸ್ ಕೋವಿಶೀಲ್ಡ್ ಖರೀದಿಸಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರದ ಕೋಟಾದಡಿಯಲ್ಲಿ ಇಂದು 2️⃣ ಲಕ್ಷ ಡೋಸ್ ಕೋವಿಶೀಲ್ಡ್ ಕರ್ನಾಟಕಕ್ಕೆ ಬಂದಿದೆ. ಲಸಿಕೆಯನ್ನು ಪೂರೈಸಿದ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು.
— Dr Sudhakar K (@mla_sudhakar) May 26, 2021
◾ಕೇಂದ್ರದಿಂದ ಪಡೆದ ಒಟ್ಟು ಕೋವಿಶೀಲ್ಡ್ ಪ್ರಮಾಣ 1.07 ಕೋಟಿ ಡೋಸ್.
◾ರಾಜ್ಯವು ನೇರವಾಗಿ ಖರೀದಿಸಿದ ಒಟ್ಟು ಕೋವಿಶೀಲ್ಡ್ ಪ್ರಮಾಣ 13.54 ಲಕ್ಷ ಡೋಸ್.