ಬೆಂಗಳೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳ ಮೇಲೆ ಫೈರಿಂಗ್; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ- ಸಿಎಂ

ರಾಮಮೂರ್ತಿನಗರ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ, ರಾಮಮೂರ್ತಿನಗರ ಪೊಲೀಸರು ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ. 
ಅತ್ಯಾಚಾರ ಆರೋಪಿಗಳಿಗೆ ಗುಂಡೇಟು
ಅತ್ಯಾಚಾರ ಆರೋಪಿಗಳಿಗೆ ಗುಂಡೇಟು

ಬೆಂಗಳೂರು: ರಾಮಮೂರ್ತಿನಗರ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ, ರಾಮಮೂರ್ತಿನಗರ ಪೊಲೀಸರು ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ. 

ಪೊಲೀಸರು ಇಂದು ಬೆಳಗ್ಗೆ ಮಹಜರು ಮಾಡಲು ಆರೋಪಿಗಳನ್ನು ಅವರ ಮನೆಗೆ ಕರೆತಂದಿದ್ದರು. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಆಗ ಪೊಲೀಸರು ಆತ್ಮ ರಕ್ಷಣೆಗಾಗಿ ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ. ಇನ್ಸ್​ಪೆಕ್ಟರ್​ ಮತ್ತು ಸಬ್​ ಇನ್ಸ್​​ಪೆಕ್ಟರ್​ ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು  ಬಂದಿದೆ.

ಬಾಂಗ್ಲಾದೇಶದ 23 ವರ್ಷದ ಯುವತಿಯನ್ನು ರಾಮಮೂರ್ತಿನಗರದ ಮನೆಯೊಂದರಲ್ಲಿ ಕೆಲ‌ ದಿನ ಹಿಂದೆ ಆರೋಪಿಗಳು ಅತ್ಯಾಚಾರ ಎಸಗಿದ್ದರು. ಅದರ ವಿಡಿಯೊವನ್ನು ಆರೋಪಿಗಳೇ ಚಿತ್ರೀಕರಿಸಿ ಸಾಮಾಜಿಕ‌ ಜಾಲತಾಣಗಳಲ್ಲಿ‌ ಹರಿಬಿಟ್ಟಿದ್ದರು. ವಿಡಿಯೊ ಆಧರಿಸಿ‌ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದ ನಗರದ ಪೊಲೀಸರು, ನಾಲ್ವರು ಆರೋಪಿಗಳನ್ನು ಗುರುವಾರ ಸಂಜೆ ಬಂಧಿಸಿದ್ದರು.

ಬಾಂಗ್ಲಾದೇಶದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಕೃತ್ಯ ಅಮಾನುಷ ಘಟನೆಯಾಗಿದ್ದು ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಇದೊಂದು ಅಮಾನುಷವಾದ ಘಟನೆ. ಯಾರು ಸಹಿಸಲು ಸಾಧ್ಯವಿಲ್ಲ. ಆರೋಪಿಗಳಿಗೆ ಸರಿಯಾದ ರೀತಿಯ ಶಿಕ್ಷೆಯಾಗಬೇಕು. ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳುತ್ತೇವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com