ಬೆಂಗಳೂರು: ಶುಲ್ಕ ಪಾವತಿಸದ್ದಕ್ಕೆ ಸೋಂಕಿತನ ಮೃತದೇಹ ನೀಡದ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲು

ಚಿಕಿತ್ಸಾ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ಕೊರೋನಾ ಸೋಂಕಿನಿಂದ ಸಾವಿಗೀಡಾದ ವ್ಯಕ್ತಿಯ ಮೃತದೇಹವನ್ನು ಒತ್ತೆಯಾಗಿರಿಸಿಕೊಂಡ ಆರೋಪದ ಮೇಲೆ ನಗರದ ಖಾಸಗಿ ಆಸ್ಪತ್ರೆಯೊಂದರ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಚಿಕಿತ್ಸಾ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ಕೊರೋನಾ ಸೋಂಕಿನಿಂದ ಸಾವಿಗೀಡಾದ ವ್ಯಕ್ತಿಯ ಮೃತದೇಹವನ್ನು ಒತ್ತೆಯಾಗಿರಿಸಿಕೊಂಡ ಆರೋಪದ ಮೇಲೆ ನಗರದ ಖಾಸಗಿ ಆಸ್ಪತ್ರೆಯೊಂದರ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ. 

ಉತ್ತರಹಳ್ಳಿ ಮುಖ್ಯರಸ್ತೆಯ ಚನ್ನಸಂದ್ರದ ಪಾಥ್ ವೇ ಆಸ್ಪತ್ರೆ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಚಿಕಿತ್ಸೆ ಫಲಿಸದದೆ ಗುರುವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಮೃತ ಲಕ್ಷ್ಮೀ ನಾರಾಯಣ ಸಂಬಂಧಿಕರು ನೀಡಿದ ದೂರಿನ ಮೇರೆಗೆ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 

ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಮೇ.17 ರಂದು ಚನ್ನಸಂದ್ರದ ಪಾಥ್ವೆ ಆಸ್ಪತ್ರೆಯ ಸುಬ್ರಹ್ಮಣ್ಯಪುರದ ನಿವಾಸಿ ಲಕ್ಷ್ಮೀ ನಾರಾಯಣ್ ಅವರನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಗುರುವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅಂತೆಯೇ ಮೃತದೇಹವನ್ನು ಪಡೆಯಲು ಕುಟುಂಬ ಸದಸ್ಯರು ಆಸ್ಪತ್ರೆಗೆ ತೆರಳಿದ್ದಾರೆ. 

ಆದರೆ, ಚಿಕಿತ್ಸಾ ವೆಚ್ಚ ರೂ.3.67 ಲಕ್ಷ ಬಾಕಿ ಇದ್ದು, ಪಾವತಿ ಮಾಡಿದ ಹೊರತು ಮೃತದೇಹ ನೀಡುವುದಿಲ್ಲ ಎಂದು ಆಸ್ಪತ್ರೆ ಆಡಳಿತ ಮಂಡಳಿ ಹೇಳಿದೆ. ಹಣ ನೀಡಲು ಕುಟುಂಬಸ್ಥರು ನಿರಾಕರಿಸಿದಾಗ ಮೃತನ ಸಹೋದರನಿಗೆ ಆಸ್ಪತ್ರೆಯ ಸಿಬ್ಬಂದಿಗಳು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. 

ಬಳಿಕ ಈ ವಿಚಾರ ತಿಳಿದ ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಕೂಡಲೇ ಮಧ್ಯಪ್ರವೇಶಿಸಿದ್ದಾರೆ. ಬಳಿಕ ಆಸ್ಪತ್ರೆ ಸಿಬ್ಬಂದಿ ಶವವನ್ನು ಮೃತರ ಸಂಬಂಧಿಕರಿಗೆ ಹಸ್ತಾಂತರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com