ಕೊನೆಗೂ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಲಸಿಕೆ ವಿತರಣಾ ಕೇಂದ್ರಕ್ಕೆ ಚಾಲನೆ

ಸುದೀರ್ಘ ವರ್ಷಗಳ ಬಳಿಕ ಕೊನೆಗೂ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಕೋವಿಡ್ ಲಸಿಕೆ ವಿತರಣಾ ಕೇಂದ್ರಕ್ಕೆ ಚಾಲನೆ ನೀಡಲಾಗಿದೆ.
ಆಸ್ಪತ್ರೆ, ಪಿಹೆಚ್ ಸಿ ಗಳಲ್ಲಿ ಕೋವಿಡ್-19 ಲಸಿಕೆ ದಾಸ್ತಾನು ಕೊರತೆ
ಆಸ್ಪತ್ರೆ, ಪಿಹೆಚ್ ಸಿ ಗಳಲ್ಲಿ ಕೋವಿಡ್-19 ಲಸಿಕೆ ದಾಸ್ತಾನು ಕೊರತೆ

ಬೆಂಗಳೂರು: ಸುದೀರ್ಘ ವರ್ಷಗಳ ಬಳಿಕ ಕೊನೆಗೂ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಕೋವಿಡ್ ಲಸಿಕೆ ವಿತರಣಾ ಕೇಂದ್ರಕ್ಕೆ ಚಾಲನೆ ನೀಡಲಾಗಿದೆ.

ಹೌದು.. ಸರ್ಕಾರಿ ಆರೋಗ್ಯ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕೊನೆಗೂ ಜನರ ವರ್ಷಗಳ ಕಾಯುವಿಕೆ ಅಂತ್ಯವಾಗಿದ್ದು, ಇಲ್ಲಿನ ಕೈಗಾರಿಕಾ ಪ್ರದೇಶ ಮತ್ತು ಸುತ್ತಮುತ್ತಲಿನ ಹಳ್ಳಿಗಳ ನಿವಾಸಿಗಳಿಗೆ ಸಹಾಯ ಮಾಡಲು ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಶನಿವಾರ ತಾತ್ಕಾಲಿಕ  ಪ್ರಾಥಮಿಕ ಆರೋಗ್ಯ ಕೇಂದ್ರ (ಪಿಎಚ್‌ಸಿ) ಮತ್ತು ಕೋವಿಡ್ ಲಸಿಕೆ ವಿತರಣಾ ಕೇಂದ್ರವನ್ನು ಉದ್ಘಾಟಿಸಲಾಯಿತು.

ಸ್ಥಳೀಯ ಶಾಸಕ ಕೃಷ್ಣಪ್ಪ ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರು ಈ ಸೇವೆಗಳನ್ನು ಉದ್ಘಾಟಿಸಿದರು. ಜಿಲ್ಲಾಧಿಕಾರಿಗಳು ಎಲೆಕ್ಟ್ರಾನಿಕ್ಸ್ ಸಿಟಿ ಇಂಡಸ್ಟ್ರಿಯಲ್ ಟೌನ್‌ಶಿಪ್ ಪ್ರಾಧಿಕಾರದ (ಇಎಲ್‌ಸಿಐಟಿಎ) ಸದಸ್ಯರನ್ನು ಶನಿವಾರ ಭೇಟಿಯಾಗಿ ಸೂಕ್ತ ಭೂಮಿಯನ್ನು ಗುರುತಿಸಿದ ನಂತರ  ಶಾಶ್ವತ ಪಿಎಚ್‌ಸಿ ಸ್ಥಾಪಿಸಲಾಗುವುದು. ಪ್ರಸ್ತುತ ಚಾಲನೆ ನೀಡಲಾಗಿರುವ ಈ ಕೋವಿಡ್-19 ವ್ಯಾಕ್ಸಿನೇಷನ್ ಮತ್ತು ಪಿಎಚ್‌ಸಿ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ಕೂಡ ಮಾಡಲಾಗುವುದು ಎಂದು ಶಾಸಕ ಕೃಷ್ಣಪ್ಪ ಹೇಳಿದರು.

ಈ ಹಿಂದೆ ಅಂದರೆ ಮೇ 14 ರಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಮತ್ತು ಕನ್ನಡಪ್ರಭ ಡಾಟ್ ಕಾಮ್ 'ಹೆಸರಿಗಷ್ಟೇ ಟೆಕ್ ಹಬ್; ಕೊರೋನಾ 2ನೇ ಅಲೆ ಆರಂಭವಾಗಿದ್ದರೂ ಆರೋಗ್ಯ ವ್ಯವಸ್ಥೆಗಳಿಲ್ಲ, ಎಲೆಕ್ಟ್ರಾನಿಕ್ ಸಿಟಿ ಜನರ ಸಂಕಷ್ಟ ಕೇಳುವವರಾರು?' ಎಂಬ ಶೀರ್ಷಿಕೆಯಡಿಯಲ್ಲಿ ಎಲೆಕ್ಟ್ರಾನಿಕ್ ಸಿಟಿಯ  ವೈದ್ಯಕೀಯ ಮೂಲಭೂತ ಸೌಕರ್ಯಗಳ ಕೊರತೆಯ ಕುರಿತು ಬೆಳಕು ಚೆಲ್ಲುವ ಪ್ರಯತ್ನ ಮಾಡಿತ್ತು. ಇಲ್ಲಿನ ಸ್ಥಳೀಯ ನಿವಾಸಿಗಳು ತಮ್ಮ ಆರೋಗ್ಯ ತಪಾಸಣೆಗಾಗಿ ಜಿಗಣಿ, ಅನೆಕಲ್, ಅತ್ತಿಬೆಲೆ, ಬೊಮ್ಮನಹಳ್ಳಿ ಅಥವಾ ಇತರ ದೂರದ ಸ್ಥಳಗಳಿಗೆ ಪ್ರಯಾಣಿಸಬೇಕಿತ್ತು. ಇದೀಗ ಈ ವರದಿಗಳಿಂದ ಎಚ್ಚೆತ್ತ  ಅಧಿಕಾರಿಗಳು ತಾತ್ಕಾಲಿಕ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಕೋವಿಡ್ ಲಸಿಕೆ ವಿತರಣಾ ಕೇಂದ್ರಕ್ಕೆ ಚಾಲನೆ ನೀಡಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿರುವ ಸ್ಥಳೀಯ ನಿವಾಸಿ ಮಣಿ ಅವರು, ಇದು ಅರ್ಧ ಗೆಲುವಷ್ಟೇ... ಶಾಶ್ವತ ಪಿಎಚ್ ಸಿ ಮತ್ತು ವ್ಯಾಕ್ಸಿನ್ ಕೇಂದ್ರ ಸ್ಥಾಪನೆಯಾದಾಗಲೇ ನಾವು ಪೂರ್ಣ ಯುದ್ಧ ಗೆದ್ದಂತೆ. ನಾವು ವೈದ್ಯಕೀಯ ಸಹಾಯಕ್ಕಾಗಿ ಬೊಮ್ಮನಹಳ್ಳಿ ಅಥವಾ ದಕ್ಷಿಣ ಬೆಂಗಳೂರಿನ ಮೇಲೆ ಅವಲಂಬಿತರಾಗಿದ್ದೇವೆ  ಎಂದು ಹೇಳಿದರು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com