ಲಸಿಕೆ ಮಾರಿ ಸಂಸದ ತೇಜಸ್ವಿ ಸೂರ್ಯ ಮತ್ತು ಅವರ ಚಿಕ್ಕಪ್ಪ ರವಿ ಸುಬ್ರಮಣ್ಯರಿಂದ ಹಣ ಸಂಪಾದನೆ: ಕಾಂಗ್ರೆಸ್ ಆರೋಪ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಅವರ ಚಿಕ್ಕಪ್ಪ ರವಿ ಸುಬ್ರಮಣ್ಯ ಕೊರೋನಾ ಲಸಿಕೆಗಳನ್ನು ಮಾರಿ ಆ ಮೂಲಕ ಹಣ ಸಂಪಾದಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ

ನವದೆಹಲಿ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಅವರ ಚಿಕ್ಕಪ್ಪ ರವಿ ಸುಬ್ರಮಣ್ಯ ಕೊರೋನಾ ಲಸಿಕೆಗಳನ್ನು ಮಾರಿ ಆ ಮೂಲಕ ಹಣ ಸಂಪಾದಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರು ಕರ್ನಾಟಕದ ಖಾಸಗಿ ಆಸ್ಪತ್ರೆಯಲ್ಲಿ ಸುಬ್ರಮಣ್ಯ ಪ್ರತಿ ಲಸಿಕೆಗೆ 700 ರೂಪಾಯಿಗೆ ಮಾರಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಸಂಬಂಧ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಜೊತೆಗೆ ಅವರನ್ನು ಸಂಸದ ಮತ್ತು ಶಾಸಕ  ತೆಗೆದುಹಾಕಬೇಕು ಎಂದು ಆರೋಪಿಸಿದ್ದಾರೆ. ಈ ಆರೋಪವನ್ನು ಬಿಜೆಪಿ ನಾಯಕರು ನಿರಾಕರಿಸಿದ್ದಾರೆ.

ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಲಸಿಕೆಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಸುಮಾರು 900 ರಿಂದ 1200 ರೂ ವರಗೆ ಮಾರಾಟ ಮಾಡಲಾಗುತ್ತಿದೆ. ಇದರಲ್ಲಿ ಆಡಳಿತ ಪಕ್ಷದ ಸದಸ್ಯರು ಸಹಿತ ಭಾಗಿಯಾಗಿದ್ದಾರೆ ಅದರಿಂದ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಮಧ್ಯಪ್ರವೇಶಿಸಿ ದೂರು ದಾಖಲಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸೋರಿಕೆಯಾದ ಆಡಿಯೊ ಟೇಪ್ ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕಾದರೆ ನೀವು 900 ರುಪಾಯಿ ಕೊಡಬೇಕಾಗುತ್ತದೆ ಎಂದು ಕೇಳಲಾಗುತ್ತದೆ. ಅದಕ್ಕೆ ನನ್ನ ಬಳಿ ಅಷ್ಟು ಹಣ ಇಲ್ಲ ಎಂದು ಹೇಳಿದಾಗ ಅದಕ್ಕೆ ವ್ಯಕ್ತಿಯೋರ್ವ ಇಲ್ಲ ನಾವು ಆ 900 ರುಪಾಯಿ ಹಣದಲ್ಲಿ 700 ರುಪಾಯಿಯನ್ನು ಶಾಸಕ ರವಿ ಸುಬ್ರಮಣ್ಯರಿಗೆ ಕೊಡಬೇಕು ಎಂದು ಹೇಳಲಾಗಿದೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com