ರಾಜ್ಯದಲ್ಲಿ 1,250 ಜನರಿಗೆ ಬ್ಲ್ಯಾಕ್ ಫಂಗಸ್: 39 ಮಂದಿ ಸಾವು

ಕರ್ನಾಟಕದಲ್ಲಿ ಈವರೆಗೆ ಒಟ್ಟು 1,250 ಜನರಿಗೆ ಬ್ಲಾಕ್​ ಫಂಗಸ್ ಸೋಂಕು ಉಂಟಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ 39 ಜನರು ಸಾವನ್ನಪ್ಪಿದ್ದಾರೆಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕರ್ನಾಟಕದಲ್ಲಿ ಈವರೆಗೆ ಒಟ್ಟು 1,250 ಜನರಿಗೆ ಬ್ಲಾಕ್​ ಫಂಗಸ್ ಸೋಂಕು ಉಂಟಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ 39 ಜನರು ಸಾವನ್ನಪ್ಪಿದ್ದಾರೆಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. 

ಈ ಪೈಕಿ ಬೆಂಗಳೂರು ನಗರ ಒಂದರಲ್ಲಿಯೇ 521 ಮಂದಿಗೆ ಬ್ಲ್ಯಾಕ್ ಫಂಗಸ್ ಸೋಂಕು ಉಂಟಾಗಿದ್ದು, ಇದರಲ್ಲಿ 508 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 10 ಮಂದಿ ಮಾತ್ರ ಗುಣಮುಖರಾಗಿದ್ದಾರೆ. 3 ಜನರು ಮೃತಪಟ್ಟಿದ್ದಾರೆ.
 
ಚಿಕ್ಕಮಗಳುರೂ, ಚಿಕ್ಕಬಳ್ಳಾಪುರದಲ್ಲಿ ತಲಾ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆ ಅಂಕಿ-ಅಂಶ ಬಿಡಗುಡೆ ಮಾಡಿದೆ. 

ಸಾವಿನ ಸಂಖ್ಯೆ ಇನ್ನೂ ಸ್ಪಷ್ಟನೆ ಮೂಡಬೇಕಿದ್ದು, ಈ ಕುರಿತು ಡೆತ್ ಆಡಿಟ್ ನಡೆಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ 

ಹೀಗಾಗಿ ಡೆತ್ ಆಡಿಟ್ ಬಳಿಕ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಧಾರವಾಡ, ಕಲಬುರಗಿ ಹಾಗೂ ಬಾಗಲಕೋಟೆಯಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದೆ. ಧಾರವಾಡದಲ್ಲಿ 119 ಮಂದಿಗೆ ಸೋಂಕು ಉಂಟಾಗಿದ್ದು, ಎಂಟು ಮಂದಿ ಬಲಿಯಾಗಿದ್ದಾರೆ. ಉಳಿದ 11 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಲಬುರಗಿಯಲ್ಲಿ 102 ಮಂದಿಗೆ ಸೋಂಕು ಉಂಟಾಗಿದ್ದು, 94 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com