ವಾಸ್ತವವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ: ಶಾಲೆಗಳ ಪುನಾರಂಭ ದಿನಾಂಕ ನಿಗದಿಗೆ ನಿರ್ದೇಶನ ನೀಡಲು ಹೈಕೋರ್ಟ್ ನಕಾರ

ಕೋವಿಡ್ 19 ಸಾಂಕ್ರಾಮಿಕ ರೋಗದ ಮಧ್ಯೆ ಶಾಲಾ ತರಗತಿಗಳ ಪುನಾರಂಭ ದಿನಾಂಕವನ್ನು ನಿಗದಿಪಡಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಕೋವಿಡ್ 19 ಸಾಂಕ್ರಾಮಿಕ ರೋಗದ ಮಧ್ಯೆ ಶಾಲಾ ತರಗತಿಗಳ ಪುನಾರಂಭ ದಿನಾಂಕವನ್ನು ನಿಗದಿಪಡಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಇ ಸಂಚಿತ್ ಸಂಜೀವ್ ಕುಮಾರ್ ಅವರ ವಿಭಾಗೀಯ ಪೀಠವು ಈ ವಿಷಯದಲ್ಲಿ ವಾಸ್ತವತೆಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

"ಕೋವಿಡ್ 19 ಸಾಂಕ್ರಾಮಿಕ ರೋಗವು ಕಡಿಮೆಯಾಗದ ಹೊರತು ಶಾಲೆಗಳ ತೆರೆಯುವ ದಿನಾಂಕದ ಕುರಿತು ತೀರ್ಮಾನಿಸಲು ನಾವು ರಾಜ್ಯ ಸರ್ಕಾರವನ್ನು ಕೇಳಲು ಸಾಧ್ಯವಿಲ್ಲ ... ನಾವು ವಾಸ್ತವಗಳನ್ನು ನಿರ್ಲಕ್ಷಿಸಲಾಗುವುದಿಲ್ಲ ... ನಾವು ಏನನ್ನೂ ಊಹಿಸಲು ಸಾಧ್ಯವಿಲ್ಲ" ಎಂದು ನ್ಯಾಯಾಲಯ ಹೇಳಿದೆ.

6 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ನೀಡುವಂತೆ ರಾಜ್ಯಕ್ಕೆ ನಿರ್ದೇಶನ ಕೋರಿ ರಾಧಾ ಎಂ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಜಯಣ್ಣ ಕೊಠಾರಿ ಅವರು ಮಕ್ಕಳ ಅನುಕೂಲಕ್ಕಾಗಿ ಶಾಲೆಗಳನ್ನು ಪುನಃ ತೆರೆಯಲು ರಾಜ್ಯವು ಕನಿಷ್ಠ ತಾತ್ಕಾಲಿಕ ದಿನಾಂಕಗಳನ್ನು ನೀಡಬಹುದು ಎಂದು ವಾದಿಸಿದರು.

ಆದಾಗ್ಯೂ, ನ್ಯಾಯಾಲಯವು ಈ ವಾದದಲ್ಲಿ ಯಾವುದೇ ಗಂಭೀರತೆಯನ್ನು ಕಾಣಲಿಲ್ಲ. "ನಾವು ಇಂದು ಯಾವುದೇ ನಿರ್ದೇಶನಗಳನ್ನು ನೀಡುತ್ತಿಲ್ಲ. ರಾಜ್ಯವು ತನ್ನ ನಿರ್ಧಾರವನ್ನು ದಾಖಲೆಯಲ್ಲಿ ಇಡುತ್ತದೆ. ಜೂನ್ 8 ರಂದು ಅದನ್ನು ಲಿಸ್ಟ್ ಮಾಡಲು ನಾವು ಹೇಳಲಿದ್ದೇವೆ".

ಅದರಂತೆ ಜೂನ್ 8 ರಂದು ಮುಂದಿನ ವಿಚಾರಣೆಗೆ ಈ ವಿಷಯವನ್ನು ಪಟ್ಟಿ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com