ನಾಡಿನಾದ್ಯಂತ 66ನೇ ಕನ್ನಡ ರಾಜ್ಯೋತ್ಸವ ಆಚರಣೆ: ಎಲ್ಲೆಡೆ ಮನೆಮಾಡಿದ ಸಂಭ್ರಮ, ಜನತೆಗೆ ಸಿಎಂ ಬೊಮ್ಮಾಯಿ ಶುಭಾಶಯ

ರಾಜ್ಯದಾದ್ಯಂತ 66ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ನಾಡಿನ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಾದ್ಯಂತ 66ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ನಾಡಿನ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಬೊಮ್ಮಾಯಿಯವರು, ನಾಡಿನ ಸಮಸ್ತ ಜನತೆಗೆ 66ನೇ ಕನ್ನಡ ರಾಜ್ಯೋತ್ಸವದ ಹೃತ್ಪೂರ್ವಕ ಶುಭಕಾಮನೆಗಳು. ನಾಡಿನ ಏಕತೆ, ಸ್ವಾಭಿಮಾನ, ಸಾಮರಸ್ಯ, ಸಹಬಾಳ್ವೆಯ ಸಂಕೇತವಾದ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆಯ ಆಚರಣೆ. ನಮ್ಮ ಕನ್ನಡದ ಅಸ್ಮಿತೆ ಸದಾ ಜಾಗೃತವಾಗಿರಲಿ, ಕನ್ನಡತನದ ಅಭಿಮಾನ ನಿರಂತರವಾಗಿರಲಿ ಎಂದು ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್ ಅವರು ಟ್ವೀಟ್ ಮಾಡಿ, ಸಮಸ್ತ ಕರುನಾಡ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು.ಕರ್ನಾಟಕ ಏಕೀಕರಣಕ್ಕಾಗಿ ದುಡಿದ ಮಹನೀಯರನ್ನು ಸ್ಮರಿಸೋಣ.ಅವರ ಆಶಯದಂತೆ ಭಾಷೆ,ಭೂಷಣ,ಭೋಜನಗಳಲ್ಲಿ ಕನ್ನಡತನ ಮೆರೆಯೋಣ.ಕನ್ನಡಕ್ಕಾಗಿ ನಾವು ಅಭಿಯಾನವನ್ನು ನಮ್ಮ ಮಾತು,ಬರವಣಿಗೆ,ವ್ಯವಹಾರಗಳಲ್ಲಿ ವರ್ಷ ಪೂರ್ತಿ ಮುಂದುವರೆಸೋಣ ಎಂದು ತಿಳಿಸಿದ್ದಾರೆ.

ಅಲ್ಲದೆ, ಕನ್ನಡದಲ್ಲಿಯೇ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೂ ಧನ್ಯವಾದಗಳನ್ನು ಹೇಳಿದ್ದಾರೆ.

ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಜನತೆಗೆ ಶುಭಾಶಯ ಕೋರಿದ್ದ ಪ್ರಧಾನಿ ಮೋದಿಯವರು ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com