ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ: 17 ಆರೋಪಿಗಳ ವಿರುದ್ಧ ಆರೋಪ ರೂಪಿಸಿದ ಕೋರ್ಟ್

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ 17 ಆರೋಪಿಗಳ ವಿರುದ್ಧ ಸಿಸಿಹೆಚ್ ವಿಶೇಷ ನ್ಯಾಯಾಲಯದಿಂದ ಆರೋಪ ನಿಗದಿ ಮಾಡಲಾಗಿದೆ.
ಗೌರಿ ಲಂಕೇಶ್
ಗೌರಿ ಲಂಕೇಶ್

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ 17 ಆರೋಪಿಗಳ ವಿರುದ್ಧ ಸಿಸಿಹೆಚ್ ವಿಶೇಷ ನ್ಯಾಯಾಲಯದಿಂದ ಆರೋಪ ನಿಗದಿ ಮಾಡಲಾಗಿದೆ.

ಬೆಂಗಳೂರಿನ ಸಂಘಟಿತ ಅಪರಾಧಗಳ ವಿಶೇಷ ನ್ಯಾಯಾಲಯ ಶನಿವಾರ 17 ಆರೋಪಿಗಳ ವಿರುದ್ಧ ಆರೋಪ ರೂಪಿಸಿದೆ. ಡಿಸೆಂಬರ್ 8 ರಿಂದ ಗೌರಿ ಲಂಕೇಶ್ ಹತ್ಯೆ ಕೇಸ್ ವಿಚಾರಣೆ ಆರಂಭಿಸಲಿದೆ.

ಇನ್ನು ಈ ಸಂದರ್ಭದಲ್ಲಿ ವಿಚಾರಣೆಯನ್ನು ಯಾವುದೇ ಅಡೆತಡೆಗಳು ಇಲ್ಲದೆ ಮಾಡುವ ನಿಟ್ಟಿನಲ್ಲಿ ನಿರ್ದಿಷ್ಟ ಆದೇಶ ಇಲ್ಲದೆ ಯಾವುದೇ ಆರೋಪಿಗಳನ್ನು ಬೇರೆ ಜೈಲಿಗೆ ವರ್ಗಾವಣೆ ಮಾಡಬಾರದು ಎಂದು ನ್ಯಾಯಾಲಯ ಸೂಚಿಸಿದೆ. ಇನ್ನು ಆರೋಪಿಗಳಿಗೆ ಕೊಲೆ, ಕ್ರಿಮಿನಲ್‌ ಪಿತೂರಿ, ಸಂಘಟಿತ ಅಪರಾಧಕ್ಕೆ ಸಂಬಂಧಿಸಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳು, 2000ರ ಕರ್ನಾಟಕ ಸಂಘಟಿತ ಅಪರಾಧ ಕಾಯಿದೆ ಹಾಗೂ 1959ರ ಶಸ್ತ್ರಾಸ್ತ್ರ ಕಾಯಿದೆ, ಅಡಿಯಲ್ಲಿ ಆರೋಪಗಳನ್ನು ರೂಪಿಸಲಾಗಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 17 ಜನರನ್ನು ಬಂಧಿಸಲಾಗಿದೆ. ನ್ಯಾಯಾಲಯ ಆಕ್ಟೋಬರ್ 29 ರಂದು ಬಂಧಿತ ಆರೋಪಿಗಳ ವಿಚಾರಣೆ ನಡೆಸಿದೆ. ಆರೋಪಿಗಳಾದ ಅಮೋಲ್ ಕಾಳೆ, ಪರಶುರಾಮ್ ವಾಗ್ಮೋರೆ, ಅಮಿತ್ ಬಡ್ಡಿ, ಗಣೇಶ್ ಮಿಸ್ಕಿನ್, ಅಮಿತ್ ದೇಗ್ವೆಕರ್ ಸೇರಿ 17 ಜನರ ವಿರುದ್ಧ ಎಸ್ಐಟಿ ಚಾರ್ಜ್ಶೀಟ್ ಸಲ್ಲಿಸಿತ್ತು. ಐಪಿಸಿ ಸೆಕ್ಷನ್ 302, 120ಬಿ, ಆರ್ಮ್ಸ್ ಌಕ್ಟ್, ಕೋಕಾ 2000 ಕಾಯ್ದೆ, ಹಲವು ಸೆಕ್ಷನ್ಗಳಡಿ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು

ಆರೋಪಿಗಳು ಮುಂಬೈ, ಪುಣೆ ಸೇರಿ ಬೇರೆ ಬೇರೆ ಜೈಲುಗಳಲ್ಲಿ ಇದ್ದಾರೆ. ಈ ಹಿನ್ನೆಲೆ ಎಲ್ಲರೂ ವಿಚಾರಣೆಗೆ ಹಾಜರಾಗುತ್ತಿಲ್ಲ. ಈ ನಿಟ್ಟಿನಲ್ಲಿ ಆರೋಪಿಗಳನ್ನು ಮುಂಬೈನ ಆರ್ಥರ್‌ ರೋಡ್‌ ಜೈಲು, ಪುಣೆಯ ಯರವಾಡ ಜೈಲು, ತುಮಕೂರು, ಮೈಸೂರು, ಬಳ್ಳಾರಿ ಹಾಗೂ ಶಿವಮೊಗ್ಗದ ಜೈಲುಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕರೆತರುವಂತೆ ಆದೇಶ ನೀಡಲಾಗಿತ್ತು.

ಗೌರಿ ಹತ್ಯೆ ಪ್ರಕರಣ: ಕವಿತಾ ಲಂಕೇಶ್‌ ಅರ್ಜಿ ಪರಿಗಣಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದ ಸುಪ್ರಿಂ ಗೌರಿ ಹತ್ಯೆ ಪ್ರಕರಣ: ಕವಿತಾ ಲಂಕೇಶ್‌ ಅರ್ಜಿ ಪರಿಗಣಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದ ಸುಪ್ರಿಂ ಈ ನಡುವೆ ಈ ಸಂದರ್ಭದಲ್ಲಿ ವಿಚಾರಣೆಯನ್ನು ಯಾವುದೇ ಅಡೆತಡೆಗಳು ಇಲ್ಲದೆ ಮಾಡುವ ನಿಟ್ಟಿನಲ್ಲಿ ನಿರ್ದಿಷ್ಟ ಆದೇಶ ಇಲ್ಲದೆ ಯಾವುದೇ ಆರೋಪಿಗಳನ್ನು ಬೇರೆ ಜೈಲಿಗೆ ವರ್ಗಾವಣೆ ಮಾಡಬಾರದು ಎಂದು ನ್ಯಾಯಾಲಯ ಸೂಚನೆ ನೀಡಿದೆ.

ಹಾಗೆಯೇ ಕೊರೊನಾ ವೈರಸ್‌ ಸೋಂಕು ಹಿನ್ನೆಲೆಯಲ್ಲಿಯೂ ವಿಚಾರಣೆಯು ವಿಳಂಬವಾಗುತ್ತಿದೆ. ಈ ನಿಟ್ಟಿನಲ್ಲಿ ಆರೋಪ ನಿಗದಿ ಮಾಡುವುದು ಮುಂದೂಡಿಕೆ ಆಗುತ್ತಲಿತ್ತು. ಈ ಕಾರಣದಿಂದಾಗಿ ನಗರದ ಪ್ರಧಾನ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಧೀಶ ಎ ಬಿ ಕಟ್ಟಿ, ವಿಡಿಯೋ ಕಾನ್ಫೆರೆನ್ಸ್‌ ಮೂಲಕ ಆರೋಪವನ್ನಿ ನಿಗದಿ ಮಾಡಲು ತೀರ್ಮಾನ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com