ಕರ್ನಾಟಕ ಹೈಕೋರ್ಟ್‌ಗೆ ಮೂವರು ವಕೀಲರನ್ನು ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಿಸಿ ಅಧಿಸೂಚನೆ ಹೊರಡಿಸಿದ ಕೇಂದ್ರ
ಮೂವರು ವಕೀಲರನ್ನು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಿಸಿ ಕೇಂದ್ರ ಸರ್ಕಾರವು ಬುಧವಾರ ಅಧಿಸೂಚನೆ ಹೊರಡಿಸಿದೆ.
Published: 03rd November 2021 06:44 PM | Last Updated: 03rd November 2021 07:59 PM | A+A A-

ಕರ್ನಾಟಕ ಹೈಕೋರ್ಟ್
ಬೆಂಗಳೂರು: ಮೂವರು ವಕೀಲರನ್ನು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಿಸಿ ಕೇಂದ್ರ ಸರ್ಕಾರವು ಬುಧವಾರ ಅಧಿಸೂಚನೆ ಹೊರಡಿಸಿದೆ.
ವಕೀಲರಾದ ಅನಂತ್ ರಾಮನಾಥ್ ಹೆಗಡೆ, ಸಿದ್ದಯ್ಯ ರಾಚಯ್ಯ ಮತ್ತು ಕಣ್ಣನಕುಳಿ ಶ್ರೀಧರನ್ ಹೇಮಲೇಖಾ ಅವರನ್ನು ಎರಡು ವರ್ಷಗಳವರೆಗೆ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.
ಇದನ್ನು ಓದಿ: ನಮಗೆ ಯಾವುದೇ ಪ್ರಶಸ್ತಿ ಪಡೆಯುವ ಆಸಕ್ತಿ ಇಲ್ಲ: ಪಿಐಎಲ್ ವಜಾ ಮಾಡಿದ ಕರ್ನಾಟಕ ಹೈಕೋರ್ಟ್
ಸುಪ್ರೀಂ ಕೋರ್ಟ್ ಕೊಲಿಜಿಯಂ ಅಕ್ಟೋಬರ್ 6ರಂದು ಈ ಮೂವರು ವಕೀಲರನ್ನು ನ್ಯಾಯಮೂರ್ತಿಗಳನ್ನಾಗಿ ನೇಮಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು.
ಕರ್ನಾಟಕ ಹೈಕೋರ್ಟ್‌ನಲ್ಲಿ ಒಟ್ಟು 62 ನ್ಯಾಯಮೂರ್ತಿಗಳ ಹುದ್ದೆಗಳಿದ್ದು, ಸದ್ಯ 43 ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.