ಮುಖ್ಯಮಂತ್ರಿ ಬೊಮ್ಮಾಯಿ ಸರ್ಕಾರಕ್ಕಿಂದು 100 ದಿನ

ಯಾವುದೇ ಸಂಭ್ರಮಾಚರಣೆಗಳಿಲ್ಲದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಗುರುವಾರಕ್ಕೆ ನೂರನೇ ದಿನಕ್ಕೆ ಕಾಲಿರಿಸಿದೆ.
ದೀಪಾವಳಿ ಹಬ್ಬದ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಪತ್ನಿಯೊಂದಿಗೆ ಬೆಳಗಾವಿ ಜಿಲ್ಲೆಯ ರೇಣುಕಾದೇವಿ ಯೆಲ್ಲಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.
ದೀಪಾವಳಿ ಹಬ್ಬದ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಪತ್ನಿಯೊಂದಿಗೆ ಬೆಳಗಾವಿ ಜಿಲ್ಲೆಯ ರೇಣುಕಾದೇವಿ ಯೆಲ್ಲಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.

ಬೆಂಗಳೂರು: ಯಾವುದೇ ಸಂಭ್ರಮಾಚರಣೆಗಳಿಲ್ಲದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಗುರುವಾರಕ್ಕೆ ನೂರನೇ ದಿನಕ್ಕೆ ಕಾಲಿರಿಸಿದೆ.

ತಮ್ಮ ಸರ್ಕಾರ 100ನೇ ದಿನಕ್ಕೆ ಕಾಲಿರಿಸಿರುವ ಹಿನ್ನೆಲೆಯಲ್ಲಿ ಆರ್'ಟಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿಯವರು, ಇದರಲ್ಲಿ ಯಾವುದೇ ರೀತಿಯ ವಿಶೇಷವಿಲ್ಲ. 100 ದಿನಗಳಲ್ಲಿ ಏನು ಮಾಡಿದ್ದೇವೆಂಬುದು ಮುಖ್ಯವಾಗಿದೆ. ಸರ್ಕಾರ ಯೋಜನಗಳ ಕುರಿತು ಜನರಿಗೆ ಮಾಹಿತಿ ನೀಡುವ ಕೆಲಸವನ್ನು ನಾವು ಮಾಡುತ್ತೇವೆಂದು ಹೇಳಿದ್ದಾರೆ.

ನೂರು ದಿನ ದೊಡ್ಡ ಮೈಲಿಗಲ್ಲು ಅಲ್ಲ. ಒಂದು ವರ್ಷವಾದರೂ ಆಗಬೇಕು. ಪ್ರಾಂರಭಿವಾಗಿ ನಾವು ಹೇಗೆ ನಡೆದುಕೊಂಡಿದ್ದೇವೆ ಎಂದು ಹೇಳಬಹುದು. ನೂರು ದಿನಗಳಲ್ಲಿ ಯಾವ ರೀತಿ ಹೆಜ್ಜೆ ಇಟ್ಟಿದ್ದೇವೆ. ಅಭಿವೃದ್ಧಿ ಪರ ಚಿಂತನೆ ಯಾವ ನಿಟ್ಟಿನಲ್ಲಿ ಇದೆ ಎನ್ನುವುದನ್ನು ನಿಮ್ಮ ಮುಂದಿಡುತ್ತೇನೆಂದು ತಿಳಿಸಿದ್ದಾರೆ.

ಈ ನಡುವ ಬೊಮ್ಮಾಯಿಯವರ ಬೆಂಬಲಿಗರು ಮಾತನಾಡಿ, ಬೊಮ್ಮಾಯಿಯವರ ಸರಳತೆ ಹಾಗೂ ಸರ್ಕಾರದ ಸಾಧನೆಗಳ ಕುರಿತು ವಿವರಿಸಿದರು.

ಝೀರೋ ಟ್ರಾಫಿಕ್ ನಿಯಮ ತೆಗೆದುಹಾಕಿ ಹೂಗುಚ್ಛಗಳು, ಹೂಮಾಲೆಗಳು ನಿರಾಕರಿಸುವ ಮೂಲಕ "ಸಾಮಾನ್ಯ ವ್ಯಕ್ತಿ" ಆಗಲು ಬೊಮ್ಮಾಯಿ ಪ್ರಯತ್ನಿಸಿದ್ದಾರೆ, ಇದಷ್ಟೇ ಅಲ್ಲದೆ, ವಿಶೇಷ ವಿಮಾನಗಳಲ್ಲಿ ಪ್ರಯಾಣಿಸುವುದನ್ನು ಕಡಿಮೆ ಮಾಡಿದ್ದು, ಸಾಮಾನ್ಯ ವಿಮಾನಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ರೈತರ ಮಕ್ಕಳಿಗೆ ಆರ್ಥಿಕ ಸಹಾಯ, ಜನ ಸೇವಕ ಯೋಜನೆಗಳು ಸೇರದಂತೆ ಸಾಕಷ್ಟು ಪ್ರಮುಖ ಯೋಜನೆಗಳನ್ನು ಘೋಷಣೆಗಳನ್ನು ಮಾಡಿದ್ದಾರೆಂದು ಹೇಳಿದ್ದಾರೆ.

ಬಿಜೆಪಿ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಅವರು ಮಾತನಾಡಿ, ಬೊಮ್ಮಾಯಿ ಅವರು ಸಮಾಜದ ಹಿಂದುಳಿದ ವರ್ಗದವರಿಗೆ ಪಿಂಚಣಿ ಹಣವನ್ನು ಹೆಚ್ಚಿಸಿದ್ದು ಅವರಲ್ಲಿರುವ ದೂರದೃಷ್ಟಿಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಉಪಚುನಾವಣೆಯಲ್ಲಿ ಸಿಂದಗಿಯಲ್ಲಿ ಗೆದ್ದು ಹಾನಗಲ್‌ನಲ್ಲಿ ಅಲ್ಪ ಮತಗಳ ಅಂತರದಿಂದ ಸೋಲನುಭವಿಸುವ ಮೂಲಕ ಪಕ್ಷ ಉತ್ತಮ ಸಾಧನೆ ಮಾಡಿದೆ. ಮುಂದಿನ ದಿನಗಳಲ್ಲಿ ಬೊಮ್ಮಾಯಿಯವರು ಉತ್ತಮ ಆಡಳಿತ ನೀಡಲಿದ್ದು, ಪಕ್ಷವನ್ನು ಮತ್ತಷ್ಟು ಬಲಪಡಿಸಲಿದ್ದಾರೆಂದು ತಿಳಿಸಿದ್ದಾರೆ.

ಈ ನಡುವ ಸರ್ಕಾರದ ಕುರಿತು ಟೀಕೆ ಮಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಬಿಜೆಪಿಯ ಅವನತಿ ಆರಂಭವಾಗಿದ್ದು, ಉಪಚುನಾವಣೆ ಫಲಿತಾಂಶವೇ ಇದಕ್ಕೆ ಸಾಕ್ಷಿಯಾಗಿದೆ. 100 ದಿನಗಳಲ್ಲಿ ಬೊಮ್ಮಾಯಿ ಅವರು ಜನತೆಗೆ ಯಾವುದೇ ರೀತಿಯ ವಿಶೇಷ ಕೊಡುಗೆಯನ್ನು ನೀಡಿಲ್ಲ. ಹಾನಗಲ್ ಉಪಚುನಾವಣೆ ಫಲಿತಾಂಶವು ಸರ್ಕಾರದ ಕೆಲಸದಿಂದ ಜನರು ತೃಪ್ತರಾಗಿಲ್ಲ ಎಂಬುದನ್ನು ತೋರಿಸುತ್ತದೆ. ಬೊಮ್ಮಾಯಿ ತಮ್ಮ ತವರು ಜಿಲ್ಲೆಯಲ್ಲಿ ಗೆಲ್ಲಲು ವಿಫಲರಾದರು. ಅವರ ಮತ್ತು ಯಡಿಯೂರಪ್ಪ ಅವರ ಸರ್ಕಾರದಲ್ಲಿ ಯಾವುದೇ ವ್ಯತ್ಯಾಸವಿಲ್ಲ, ಇಬ್ಬರೂ ಅಭಿವೃದ್ಧಿ ಕಾರ್ಯಗಳನ್ನು ನಿರ್ಲಕ್ಷಿಸಿದ್ದಾರೆ. ಮತದಾರರು ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com