ರಾಜ್ಯದಲ್ಲಿ ಇಂದು ಕೊರೋನಾದಿಂದ 5 ಸಾವು: 261 ಹೊಸ ಪ್ರಕರಣ ಪತ್ತೆ, 296 ಚೇತರಿಕೆ

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 261 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,89,275ಕ್ಕೆ ಏರಿಕೆಯಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 261 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,89,275ಕ್ಕೆ ಏರಿಕೆಯಾಗಿದೆ. 261 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8,267 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ ಇಂದು 5 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 38,095ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.48 ರಷ್ಟಿದ್ದು, ಮರಣ ಪ್ರಮಾಣ ಶೇ. 1.91 ರಷ್ಟಿದೆ. ಬೆಂಗಳೂರಿನಲ್ಲಿ 157 ಹೊಸ ಪ್ರಕರಣ ಪತ್ತೆಯಾಗಿದ್ದು, 171 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.

ಬಾಗಲಕೋಟೆ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಗದಗ್, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com