ಕೇಂದ್ರದಿಂದ ಕರ್ನಾಟಕಕ್ಕೆ 1,602 ಕೋಟಿ ರೂ. ಜಿಎಸ್‌ಟಿ ಪರಿಹಾರ ಬಿಡುಗಡೆ

ಆದಾಯ ಕೊರತೆಯನ್ನು ಸರಿದೂಗಿಸಲು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಜಿಎಸ್ ಟಿ ಪರಿಹಾರವಾಗಿ ಬುಧವಾರ 17,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು,...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಆದಾಯ ಕೊರತೆಯನ್ನು ಸರಿದೂಗಿಸಲು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಜಿಎಸ್ ಟಿ ಪರಿಹಾರವಾಗಿ ಬುಧವಾರ 17,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ  1,602.61 ಕೋಟಿ ರೂಪಾಯಿಯನ್ನು ಕೇಂದ್ರ ಹಣಕಾಸು ಇಲಾಖೆಯಿಂದ ಬಿಡುಗಡೆಯಾಗಿದೆ. 

ಮಹಾರಾಷ್ಟ್ರಕ್ಕೆ ಅತಿ ಹೆಚ್ಚು ಅಂದರೆ 3,053 ಕೋಟಿ ರೂ. ಜಿಎಸ್ ಟಿ ಪರಿಹಾರ ಹಂಚಿಕೆಯಾಗಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಗುಜರಾತ್ ಮತ್ತು ಉತ್ತರ ಪ್ರದೇಶಕ್ಕೆ ತಲಾ 1,400 ಕೋಟಿ ರೂ., ತಮಿಳುನಾಡಿಗೆ 1,314 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

2021-22ನೇ ಸಾಲಿನಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ ಒಟ್ಟು 60,000 ಕೋಟಿ ರೂಪಾಯಿ ಜಿಎಸ್ ಟಿ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ನಿನ್ನೆ ಪ್ರಕಟಣೆಯಲ್ಲಿ ತಿಳಿಸಿದೆ.

ಜಿಎಸ್ ಟಿ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಎಸ್‌ಟಿ ಪರಿಹಾರದ ಕೊರತೆಯ ಬದಲಾಗಿ 1.59 ಲಕ್ಷ ಕೋಟಿ ರೂಪಾಯಿಗಳ ಬ್ಯಾಕ್ ಟು ಬ್ಯಾಕ್ ಸಾಲವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com