ಕರ್ನಾಟಕದಲ್ಲಿ ಇಂಧನ‌ ದರ ಕಡಿತ: ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ; ಪೆಟ್ರೋಲ್, ಡಿಸೇಲ್ ಬೆಲೆ ಎಷ್ಟಾಗಲಿದೆ!

ಪೆಟ್ರೋಲ್ ಹಾಗೂ ಡೀಸಲ್ ದರದಲ್ಲಿ 7 ರೂ. ಇಳಿಕೆ ಮಾಡಿ ಕರ್ನಾಟಕ ಸರ್ಕಾರವು ಇಂದು ಅಧಿಸೂಚನೆ ಹೊರಡಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸಲ್ ದರದಲ್ಲಿ 7 ರೂ. ಇಳಿಕೆ ಮಾಡಿ ಕರ್ನಾಟಕ ಸರ್ಕಾರವು ಇಂದು ಅಧಿಸೂಚನೆ ಹೊರಡಿಸಿದೆ. 

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸಲ್ ದರವನ್ನು ಕ್ರಮವಾಗಿ  ರೂ.10 ಹಾಗೂ ರೂ. 5 ಕ್ಕೆ ಇಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ. ಈ ಆದೇಶ ಹೊರ ಬಿದ್ದ ತಕ್ಷವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿಯೂ ತೆರಿಗೆ ಕಡಿಮೆ ಮಾಡುವ ನಿರ್ಧಾರ ಪ್ರಕಟಿಸಿದರು. ಆ ಮೂಲಕ ದೇಶದ ಮೊದಲ ರಾಜ್ಯವಾಗಿ ಇಂಧನ ದರ ಇಳಿಸುವ ನಿರ್ಧಾರ ಮಾಡಿದರು.

ಕೇಂದ್ರ ಸರ್ಕಾರವು ಕಡಿತಗೊಳಿಸಿರುವ ಅಬಕಾರಿ ತೆರಿಗೆಯ ಜೊತೆಯಲ್ಲಿ ರಾಜ್ಯ ಸರ್ಕಾರವು ಪೆಟ್ರೋಲ್  ಮೇಲಿನ ಮಾರಟ ತೆರಿಗೆಯನ್ನು 35% ರಿಂದ 25.9%ಕ್ಕೆ ಮತ್ತು ಡೀಸೆಲ್ ಮೇಲಿನ ಮಾರಟ ತೆರಿಗೆಯನ್ನು  24% ರಿಂದ 14.34%ಕ್ಕೆ ಇಳಿಸಿರುತ್ತದೆ. ಇದರಿಂದ ದಿ. 3-11-21ರಂದು ಇದ್ದ ಪೆಟ್ರೋಲ್​​ನ ಚಿಲ್ಲರೆ ಮಾರಾಟ ದರವು 113.93 ರೂ. ರಿಂದ 100.63 ರೂ.ಗೆ ಬರಲಿದ್ದು, ಒಟ್ಟಾರೆ ದರ ಕಡಿತ 13.30 ರೂ. ಆಗಲಿದೆ. 

ಇನ್ನು ಡೀಸೆಲ್ ನ ಚಿಲ್ಲರೆ ಮಾರಾಟ ದರ ರೂ.104.50 ರಿಂದ ರೂ.85.03ಕ್ಕೆ ಬರಲಿದ್ದು, ಒಟ್ಟಾರೆ ದರ ಕಡಿತ ರೂ.19.14 ಆಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com