ರಾಜ್ಯದಲ್ಲಿ ಇಂದು ಕೊರೋನಾಗೆ 7 ಸಾವು: 214 ಹೊಸ ಪ್ರಕರಣ, 286 ಚೇತರಿಕೆ

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 214 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ  29,89,489ಕ್ಕೆ ಏರಿಕೆಯಾಗಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 214 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ  29,89,489ಕ್ಕೆ ಏರಿಕೆಯಾಗಿದೆ. 286 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8, 188 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ ಇಂದು 7 ಮಂದಿ ಸಾವನ್ನಪ್ಪಿದ್ದು, ಒಟ್ಟಾರೇ ಮೃತರ ಸಂಖ್ಯೆ 38,102 ಆಗಿದೆ. ಸೋಂಕಿನ ಪ್ರಮಾಣ ಶೇ. 0.26 ರಷ್ಟಿದ್ದು, ಮರಣ ಪ್ರಮಾಣ ಶೇ. 3.27 ರಷ್ಟಿದೆ. 

ಬೆಂಗಳೂರಿನಲ್ಲಿ 118 ಹೊಸ ಪ್ರಕರಣ ಪತ್ತೆಯಾಗಿದ್ದು, 117 ಸೋಂಕಿತರು ಗುಣಮುಖರಾಗಿದ್ದಾರೆ. ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ. ಬಳ್ಳಾರಿ, ಬೀದರ್, ಚಾಮರಾಜನಗರ, ದಾವಣಗೆರೆ, ಗದಗ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಮನಗರ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com