ಆತ್ಮಹತ್ಯೆ ಮಾಡಿಕೊಂಡು ಪುನೀತ್'ಗೆ ಅಗೌರವ ತೋರಿಸಬೇಡಿ: ಅಭಿಮಾನಿಗಳಿಗೆ ಕುಟುಂಬಸ್ಥರ ಮನವಿ

ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯಿಂದ ಅವರ ಅಭಿಮಾನಿಗಳು ಅತೀವ್ರ ನೋವಿನಲ್ಲಿ ಮುಳುಗಿದ್ದು, ಅಭಿಮಾನಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಮುಂದುವರೆದಿವೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಪುನೀತ್'ಗ ಅಗೌರ ತೋರಿಸದಂತೆ ಕುಟುಂಬಸ್ಥರು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಪುನೀತ್ ರಾಜ್ ಕುಮಾರ್
ಪುನೀತ್ ರಾಜ್ ಕುಮಾರ್

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯಿಂದ ಅವರ ಅಭಿಮಾನಿಗಳು ಅತೀವ್ರ ನೋವಿನಲ್ಲಿ ಮುಳುಗಿದ್ದು, ಅಭಿಮಾನಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಮುಂದುವರೆದಿವೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಪುನೀತ್'ಗ ಅಗೌರ ತೋರಿಸದಂತೆ ಕುಟುಂಬಸ್ಥರು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ನಿನ್ನೆ ವೆಂಕಟೇಶ್ ಎಂಬ 25 ವರ್ಷದ ಪುನೀತ್ ಅವರ ಅಭಿಮಾನಿ ತಮ್ಮ ಮನೆಯಲ್ಲಿ ನೇಣಿ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಪುನೀತ್ ಅವರ ಅಂತಿಮ ಸಂಸ್ಕಾರದ ವಿಡಿಯೋಗಳು, ಸಿನಿಮಾಗಳು ಹಾಗೂ ಹಾಡುಗಳನ್ನು ಸುದೀರ್ಘವಾಗಿ ನೋಡುತ್ತಿದ್ದ ಅತ ತೀವ್ರವಾಗಿ ನೊಂದುಕೊಳ್ಳುತ್ತಿದ್ದ. ಇದರಂತೆ ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಕುಟುಂಬಸ್ಥರು ಹೇಳಿದ್ದಾರೆ.

ಅಭಿಮಾನಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವ ವಿಚಾರ ತಿಳಿದ ಹಿನ್ನೆಲೆಯಲ್ಲಿ ನಟ ಶಿವರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಆತ್ಮಹತ್ಯೆಗೆ ಶರಣಾಗದಂತೆ ಮನವಿ ಮಾಡಿಕೊಂಡಿದ್ದಾರೆ.

ಪುನೀತ್ ಜೀವನ ಹಾಗೂ ಆರೋಗ್ಯವನ್ನು ಬಹಳ ಪ್ರೀತಿಸುತ್ತಿದ್ದರು. ಈ ರೀತಿಯ ನಿರ್ಧಾರಗಳನ್ನು ನೀವು ತೆಗೆದುಕೊಂಡರೆ, ನಿಮ್ಮ ಪ್ರೀತಿ ಪಾತ್ರರಿಗೆ ಯಾವ ರೀತಿಯ ಸಂದೇಶಗಳನ್ನು ಕೊಡುತ್ತೀರಿ? ನಿಮ್ಮನ್ನೇ ನಂಬಿಕೊಂಡಿರುವ ಪೋಷಕರು, ಮಕ್ಕಳಿರುತ್ತಾರೆ. ಅವರಿಗೆ ನೀವೇನು ಸಂದೇಶವನ್ನು ರವಾನಿಸುತ್ತೀರಿ? ನಿಮ್ಮ ಈ ನಿರ್ಧಾರಗಳು ನಿಮ್ಮ ನೆಚ್ಚಿನ ನಟನಿಗೆ ನೀವು ನೀಡುವ ಅಗೌರವವಾಗುತ್ತದೆ. ಅವರ ಬದುಕಿದಂತೆ ನಾವೂ ಬದುಕಬೇಕು. ಅವರಿಗೆ ಗೌರವ ನೀಡಬೇಕು ಎಂದು ಶಿವರಾಜ್ ಕುಮಾರ್ ಅವರು ಹೇಳಿದ್ದಾರೆ.

ಇದಷ್ಟೇ ಅಲ್ಲದೆ, ಮಾಧ್ಯಮಗಳೂ ಕೂಡ ಪುನೀತ್ ಅವರ ಅಂತಿಮ ಸಂಸ್ಕಾರದ ವಿಡಿಯೋಗಳನ್ನು ಪ್ರಸಾರ ಮಾಡದಂತೆ ಹಾಗೂ ಅಭಿಮಾನಿಗಳು ಪುನೀತ್ ಆಸ್ಪತ್ರೆಯಲ್ಲಿದ್ದ ಕೊನೆಯ ಕ್ಷಣದ ಫೋಟೋಗಳನ್ನೂ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳದಂತೆ ಕುಟುಂಬಸ್ಥರು ಮನವಿ ಮಾಡಿಕೊಂಡಿದ್ದಾರೆ.

ನವೆಂಬರ್ 16ಕ್ಕೆ ಅರಮನೆ ಮೈದಾನದಲ್ಲಿ ಪುನೀತ್ ನಮನ ಕಾರ್ಯಕ್ರಮ
ಈ ನಡುವೆ ಪುನೀತ್ ರಾಜಕುಮಾರ್ ಅವರಿಗೆ ಗೌರವ ನಮನ ಸಲ್ಲಿಸುವ ಉದ್ದೇಶದಿಂದ ‘ಪುನೀತ್ ನುಡಿ ನಮನ’ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್ ಅವರು ಹೇಳಿದ್ದಾರೆ.

ನ.16ರಂದು ಕಾರ್ಯಕ್ರಮ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮತಿ ನೀಡಿದ್ದಾರೆ. ಕಾರ್ಯಕ್ರಮದ ರೂಪರೇಷೆ ಸಿದ್ಧಪಡಿಸುತ್ತಿದ್ದೇವೆ. ತೆಲುಗು, ತಮಿಳು ಚಿತ್ರರಂಗದವರನ್ನು ಕರೆಯಲು ನಿರ್ಧಾರ ಮಾಡಲಾಗಿದೆ. ಇದಕ್ಕಾಗಿ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘದಿಂದ ಜಂಟಿಯಾಗಿ ಕಾರ್ಯಕ್ರಮ ಮಾಡಲು ತೀರ್ಮಾನಿಸಲಿದ್ದೇವೆಂದು ಹೇಳಿದ್ದಾರೆ.

ಪುನೀತ್ ರಾಜ್ ಕುಮಾರ್ ನಿಧನದ ನೋವು ತಡೆದುಕೊಳ್ಳುವ ಶಕ್ತಿ ‌ಯಾರಿಗು ಇಲ್ಲ. ಅಂದು ಸುಮಾರು 20 ಲಕ್ಷ ಜನ ದರ್ಶನ ಪಡೆದಿದ್ದಾರೆ. ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯ ಮಾಡುವ ತೀರ್ಮಾನ ಮಾಡಿದ್ದೇವೆ. ಪುನೀತ್ ನಮನ’ ಹೆಸರಿನಲ್ಲಿ ಕಾರ್ಯಕ್ರಮ ಮಾಡಲಿದ್ದೇವೆ. ಅರಮನೆ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಇದೇ ವೇಳೆ ಸಂಗೀತ ನಮನ ಕೂಡ ಇರಲಿದೆ ಎಂದು ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಅವರು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com