ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 151 ಸೇರಿ ರಾಜ್ಯದಲ್ಲಿ 239 ಮಂದಿಗೆ ಪಾಸಿಟಿವ್, 5 ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 239 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,89,952ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 239 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,89,952ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಐವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,112ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 151 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,52,831ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 322 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,43,809ಕ್ಕೆ ಏರಿಕೆಯಾಗಿದೆ. ಇನ್ನು 8002 ಸಕ್ರೀಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com