ಸೋಮವಾರದಿಂದ ಎಲ್ ಕೆಜಿ, ಯುಕೆಜಿ, ಅಂಗನವಾಡಿ ಕೇಂದ್ರಗಳು ಪುನರಾರಂಭ

ಕೋವಿಡ್-19 ಪ್ರಕರಣಗಳ ಸಂಖ್ಯೆ ಇಳಿಕೆಯೊಂದಿಗೆ ಸೋಮವಾರದಿಂದ ಎಲ್ ಕೆಜಿ, ಯುಕೆಜಿ, ಅಂಗನವಾಡಿ ಕೇಂದ್ರಗಳ ಪುನರಾರಂಭಕ್ಕೆ ಬಿಬಿಎಂಪಿ ಅನುಮತಿ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್-19 ಪ್ರಕರಣಗಳ ಸಂಖ್ಯೆ ಇಳಿಕೆಯೊಂದಿಗೆ ಸೋಮವಾರದಿಂದ ಎಲ್ ಕೆಜಿ, ಯುಕೆಜಿ, ಅಂಗನವಾಡಿ ಕೇಂದ್ರಗಳ ಪುನರಾರಂಭಕ್ಕೆ ಬಿಬಿಎಂಪಿ ಅನುಮತಿ ನೀಡಿದೆ. ಕೋವಿಡ್-19 ಪಾಸಿಟಿವಿಟಿ ದರ ಶೇಕಡಾ 2ಕ್ಕಿಂತ ಕಡಿಮೆ ಇರುವ ಪ್ರದೇಶಗಳಲ್ಲಿ ಭೌತಿಕ ತರಗತಿ ಪುನರಾರಂಭಿಸುವಂತೆ ಬಿಬಿಎಂಪಿ ಶನಿವಾರ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಿದೆ. 

ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸಿನ ಅನ್ವಯ ಕೋವಿಡ್ ನಿಯಮ ಪಾಲನೆಯೊಂದಿಗೆ ತನ್ನ ವ್ಯಾಪ್ತಿಯಲ್ಲಿ ಶಾಲೆ ಪುನರಾರಂಭ ನಿರ್ಧಾರವನ್ನು ಪಾಲಿಕೆ ಕೈಗೊಂಡಿದೆ. ಎಲ್ಲಾ ಶಿಕ್ಷಕರು ಸಂಪೂರ್ಣವಾಗಿ ಲಸಿಕೆ ಪಡೆದಿರಬೇಕು, ಮಕ್ಕಳ ಪೋಷಕರಿಂದ ಒಪ್ಪಿಗೆ ಪತ್ರ ಪಡೆದಿರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. 

ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೂ ಶಾಲೆಗಳು ನಡೆಯಲಿದ್ದು, ಪ್ಲೇ ಸ್ಕೂಲ್ ಗೆ ಮಕ್ಕಳನ್ನು ಕಳುಹಿಸುವ ಪೋಷಕರು ಕೂಡಾ ಸಂಪೂರ್ಣವಾಗಿ ಲಸಿಕೆ ಪಡೆದಿರಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ. ಅಕ್ಟೋಬರ್ 25 ರಿಂದ 1 ರಿಂದ 5ನೇ ತರಗತಿವರೆಗೆ ಭೌತಿಕ ತರಗತಿಗಳನ್ನು ಆರಂಭಿಸಿದ್ದ ಸರ್ಕಾರ ಸೆಪ್ಟೆಂಬರ್ 6 ರಿಂದ 6 ಮತ್ತು 8ನೇ ತರಗತಿವರೆಗೆ ಹಾಗೂ ಆಗಸ್ಟ್ 23 ರಿಂದ 9 ರಿಂದ 12 ನೇ ತರಗತಿ ಭೌತಿಕ ತರಗತಿ ಆರಂಭವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com