ವೇತನ ಪರಿಷ್ಕರಣೆಗೆ ಆಗ್ರಹ: ಸರ್ಕಾರಕ್ಕೆ 21 ದಿನಗಳ ಗಡುವು ನೀಡಿದ ಕೆಎಸ್'ಜಿಇಎ!

ಸರ್ಕಾರದಿಂದ ನೇಮಕಗೊಂಡಿರುವ ಶಿಕ್ಷಕರು ಮತ್ತು ಉಪನ್ಯಾಸಕರ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (ಕೆಎಸ್‌ಜಿಇಎ) 21 ದಿನಗಳ ಗಡುವು ನೀಡಿದ್ದು,  ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳನ್ನು ಬಹಿಷ್ಕರಿಸಿ ಹೋರಾಟಕ್ಕಿಳಿಯುವುದಾಗಿ ಎಚ್ಚರಿಕೆ ನೀಡಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸರ್ಕಾರದಿಂದ ನೇಮಕಗೊಂಡಿರುವ ಶಿಕ್ಷಕರು ಮತ್ತು ಉಪನ್ಯಾಸಕರ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (ಕೆಎಸ್‌ಜಿಇಎ) 21 ದಿನಗಳ ಗಡುವು ನೀಡಿದ್ದು,  ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳನ್ನು ಬಹಿಷ್ಕರಿಸಿ ಹೋರಾಟಕ್ಕಿಳಿಯುವುದಾಗಿ ಎಚ್ಚರಿಕೆ ನೀಡಿವೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೇತೃತ್ವದಲ್ಲಿ ಭಾನುವಾರ ನಗರದ ಎನ್‌ಜಿಒ ಹಾಲ್‌ನಲ್ಲಿ ನಡೆದ ಶಿಕ್ಷಕರು ಮತ್ತು ಪಿಯು ಉಪನ್ಯಾಸಕರ ಸಂಘಟನೆಗಳ ಪ್ರತಿನಿಧಿಗಳ ಸಭೆಯಲ್ಲಿ ಈ ಸಂಬಂಧ ಒಕ್ಕೊರಲ ನಿರ್ಣಯ ಕೈಗೊಂಡಿದ್ದು, ಸುಮಾರು 10 ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗಿದೆ.

ಸಭೆ ಬಳಿಕ ಮಾತನಾಡಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಕ್ಷರಿ ಅವರು, 20 ವರ್ಷಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸದಿದ್ದರೆ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ತರಗತಿಗಳನ್ನು ಬಹಿಷ್ಕರಿಸಲು ಸಭೆಯಲ್ಲಿ ಸರ್ವಾನುಮತದಿಂದ ನಿರ್ಧರಿಸಲಾಯಿತು ಎಂದು ಹೇಳಿದ್ದಾರೆ.

ಬೇಡಿಕೆಗಳಲ್ಲಿ ಬಡ್ತಿ, ವೇತನ ಪರಿಷ್ಕರಣೆ ಮತ್ತು ವರ್ಗಾವಣೆ ನೀತಿ ಸೇರಿವೆ. "ಸರ್ಕಾರದೊಂದಿಗೆ ಹಲವು ಬಾರಿ ಮನವಿ ಪತ್ರಗಳನ್ನು ಸಲ್ಲಿಸಿದರೂ ಮತ್ತು ಹಲವಾರು ಸುತ್ತಿನ ಮಾತುಕತೆಗಳ ಹೊರತಾಗಿಯೂ ಈ ವರೆಗೂ ಯಾವುದೇ ಬೇಡಿಕೆಗಳೂ ಈಡೇರಿಲ್ಲ. ಆದ್ದರಿಂದ, ತರಗತಿಗಳನ್ನು ಬಹಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಸರ್ಕಾರದ ಮುಂದಿಟ್ಟಿರುವ 10 ಬೇಡಿಕೆಗಳ ಪೈಕಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 75 ಸಾವಿರ ಪದವೀಧರ ಪ್ರಾಥಮಿಕ ಶಾಲಾ (1ರಿಂದ 5ನೇ ತರಗತಿ) ಶಿಕ್ಷಕರ ಹಿಂದಿನ ಸೇವಾ ಜ್ಯೇಷ್ಠತೆ ಪರಿಗಣಿಸಿ 6ರಿಂದ 8ನೇ ತರಗತಿಗೆ ಬೋಧನೆ ಮಾಡಲು ಮೇಲ್ದರ್ಜೆ ಅಥವಾ ವಿಲೀನಗೊಳಿಸಲು ಆದೇಶಿಸಬೇಕು. 1998-1999ರಲ್ಲಿ ಸೇವೆಗೆ ಸೇರಿ ನಂತರ ಸುಪ್ರೀಂ ಕೋರ್ಟ್‌ ಆದೇಶದಿಂದ ಸೇವೆಯಿಂದ ವಜಾಗೊಂಡಿದ್ದ 4000 ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು 2003ರಲ್ಲಿ ಮರು ನೇಮಕಗೊಂಡಿದ್ದು, ಅವರೆಲ್ಲರಿಗೂ ಹಿಂದಿನ ಸೇವೆಯನ್ನು ಪರಿಗಣಿಸಿ ಕಾಲ್ಪನಿಕ ವೇತನ ನಿಗದಿಪಡಿಸಬೇಕು ಎಂಬುದು ಪ್ರಮುಖವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com