ಪ್ರೊಡಕ್ಷನ್-ಲಿಂಕ್ಡ್ ಇನ್ಸೆಂಟಿವ್ ಯೋಜನೆ ಅಡಿಯಲ್ಲಿ ಚಿಪ್ ವಿನ್ಯಾಸ ಸೇರಿಸಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಪ್ರೊಡಕ್ಷನ್-ಲಿಂಕ್ಡ್ ಇನ್ಸೆಂಟಿವ್(ಪಿಎಲ್‌ಐ) ಯೋಜನೆಯಡಿ ಸೆಮಿಕಂಡಕ್ಟರ್ ಚಿಪ್ ವಿನ್ಯಾಸಕ್ಕೆ ಪ್ರೋತ್ಸಾಹ ಧನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಒತ್ತಾಯಿಸಿದೆ.
ಡಾ.ಸಿ.ಎನ್.ಅಶ್ವತ್ಥನಾರಾಯಣ್
ಡಾ.ಸಿ.ಎನ್.ಅಶ್ವತ್ಥನಾರಾಯಣ್

ಬೆಂಗಳೂರು: ಪ್ರೊಡಕ್ಷನ್-ಲಿಂಕ್ಡ್ ಇನ್ಸೆಂಟಿವ್(ಪಿಎಲ್‌ಐ) ಯೋಜನೆಯಡಿ ಸೆಮಿಕಂಡಕ್ಟರ್ ಚಿಪ್ ವಿನ್ಯಾಸಕ್ಕೆ ಪ್ರೋತ್ಸಾಹ ಧನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಒತ್ತಾಯಿಸಿದೆ.

ಇದೇ ನವೆಂಬರ್ 17 ರಿಂದ ನವೆಂಬರ್ 19 ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಬೆಂಗಳೂರು ಟೆಕ್ ಶೃಂಗಸಭೆ - 2021 (ಬಿಟಿಎಸ್)ರ ಕುರಿತು ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು, ಪಿಎಲ್ ಐ ಯೋಜನೆಯಡಿಯಲ್ಲಿ ಚಿಪ್ ವಿನ್ಯಾಸ ಮಾಡಲು ಪ್ರೋತ್ಸಾಹ ಧನ ನೀಡುವಂತೆ ಕೇಂದ್ರವನ್ನು ಕೋರಿದ್ದೇವೆ ಮತ್ತು ತಮ್ಮ ಸಲಹೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ಎಂದು ಹೇಳಿದರು.

ಶೇ. 70 ರಷ್ಟು ಚಿಪ್ ವಿನ್ಯಾಸವು ಕರ್ನಾಟಕದಲ್ಲಿ ನಡೆಯುವುದರಿಂದ ಸೆಮಿಕಂಡಕ್ಟರ್ ಉದ್ಯಮಕ್ಕೆ ಮೊದಲ ಆದ್ಯತೆ ನೀಡಲಾಗಿದೆ. ನಾವು ಎಲೆಕ್ಟ್ರಾನಿಕ್ಸ್ ಕ್ಷೇತ್ರಕ್ಕೆ ಆದ್ಯತೆ ನೀಡಲು ಪ್ರಯತ್ನಿಸುತ್ತಿದ್ದೇವೆ ಮತ್ತು ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತಿದ್ದೇವೆ ಎಂದು ಸಚಿವರು ಹೇಳಿದರು.

ನವೆಂಬರ್ 17ರಿಂದ 19ರವರೆಗೆ ಬೆಂಗಳೂರು ತಂತ್ರಜ್ಞಾನ ಶೃಂಗ ನಡೆಯಲಿದೆ. 30 ರಾಷ್ಟ್ರಗಳ ಪ್ರತಿನಿಧಿಗಳು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಇದೇ ವೇಳೆ ಮಾತನಾಡಿದ ಭಾರತ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಅಸೋಸಿಯೇಷನ್(ಐಇಎಸ್ಎ) ಅಧ್ಯಕ್ಷ ರಾಜೀವ್ ಖುಶು ಅವರು, ಸೆಮಿಕಂಡಕ್ಟರ್ ಗಳ ಕೊರತೆಯು ಜಾಗತಿಕ ವಿದ್ಯಮಾನವಾಗಿದೆ ಮತ್ತು ಪ್ರತಿ ಸೆಮಿಕಂಡಕ್ಟರ್ ಕಂಪನಿಯು ಉತ್ಪಾದನೆಯನ್ನು ಹೆಚ್ಚಿಸುತ್ತಿವೆ ಹಾಗೂ ಸರಿಯಾದ ಪೂರೈಕೆಯನ್ನು ಖಚಿತಪಡಿಸಿಕೊಳ್ಳುತ್ತಿವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com