ಶೇ.7.5ಕ್ಕೆ ಮೀಸಲಾತಿ ಹೆಚ್ಚಿಸದಿದ್ದರೆ ಸರ್ಕಾರ ಸಮುದಾಯದ ಆಕ್ರೋಶ ಎದುರಿಸಬೇಕಾಗುತ್ತದೆ: ಪ್ರಸನ್ನಾನಂದ ಸ್ವಾಮೀಜಿ ಎಚ್ಚರಿಕೆ

ಶೇ.7.5ಕ್ಕೆ ಮೀಸಲಾತಿ ಹೆಚ್ಚಿಸದಿದ್ದರೆ ಸರ್ಕಾರ ಸಮುದಾಯದ ಆಕ್ರೋಶ ಎದುರಿಸಬೇಕಾಗುತ್ತದೆ ಎಂದು ರಾಜನಹಳ್ಳಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಪ್ರಸನ್ನಾನಂದ ಸ್ವಾಮಿಜಿ (ಸಂಗ್ರಹ ಚಿತ್ರ)
ಪ್ರಸನ್ನಾನಂದ ಸ್ವಾಮಿಜಿ (ಸಂಗ್ರಹ ಚಿತ್ರ)

ದಾವಣಗೆರೆ: ಶೇ.7.5ಕ್ಕೆ ಮೀಸಲಾತಿ ಹೆಚ್ಚಿಸದಿದ್ದರೆ ಸರ್ಕಾರ ಸಮುದಾಯದ ಆಕ್ರೋಶ ಎದುರಿಸಬೇಕಾಗುತ್ತದೆ ಎಂದು ರಾಜನಹಳ್ಳಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ನಡೆದ ಹಾನಗಲ್ ಉಪ ಚುನಾವಣೆಯ ಸೋಲಿನ ಉದಾಹರಣೆ ನೀಡಿ ಮಾತನಾಡಿದ ಅವರು, ಶೇ.7.5ಕ್ಕೆ ಮೀಸಲಾತಿ ಹೆಚ್ಚಿಸದಿದ್ದರೆ ಸರ್ಕಾರ ಸಮುದಾಯದ ಆಕ್ರೋಶ ಎದುರಿಸಬೇಕಾಗುತ್ತದೆ. ಉಪ ಚುನಾವಣೆ ಸೋಲು ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ಸರ್ಕಾರ ತನ್ನ ನಿರ್ಲಕ್ಷ್ಯದ ಧೋರಣೆಯನ್ನು ಇದೇ ರೀತಿ ಮುಂದುವರೆಸಿದರೆ, ಭವಿಷ್ಯದ ಸಾರ್ವತ್ರಿಕ ಚುನಾವಣೆಗಳಲ್ಲೂ ಬಿಜೆಪಿ ಸಮುದಾಯದ ಆಕ್ರೋಶ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಮುದಾಯದ ಸಭೆಯಲ್ಲಿ ಸಮಾಜದ ಜನರನ್ನುದ್ದೇಶಿಸಿ ಮಾತನಾಡಿದ ಅವರು, '2022 ವಾಲ್ಮೀಕಿ ಜಾತ್ರೆ ಕಾರ್ಯಕ್ರಮ ಫೆಬ್ರವರಿ 8 ಮತ್ತು 9 ರಂದು ನಡೆಯಲಿದೆ. ಅಷ್ಟರೊಳಗೆ ಹೆಚ್ಚಳ ಘೋಷಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದರು. ಈ ಹಿಂದೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೂಡ ಈ ಕುರಿತು ತಮಗೆ ಭರವಸೆ ನೀಡಿದ್ದರು. ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು 2020 ರಲ್ಲಿ ತನ್ನ ವರದಿಯನ್ನು ಸಲ್ಲಿಸಿತ್ತು. ಆ ವರದಿಯಲ್ಲಿನ ಶಿಫಾರಸ್ಸು ನ್ಯಾಯಯುತವಾಗಿದೆ. ಆದರೆ ವರದಿಯನ್ನು ಸ್ವೀಕರಿಸಿದ ಹೊರತಾಗಿಯೂ ಸರ್ಕಾರ ಈ ನಿಟ್ಟಿನಲ್ಲಿ ಯಾವುದೇ ಕ್ರಮವನ್ನು ತೆಗೆದುಕೊಳ್ಳಲಿಲ್ಲ. ಈ ಹಿಂದೆ ಬಿಎಸ್ ವೈ ಇದೇ ರೀತಿ ಸಮಸ್ಯೆಯನ್ನು ಸುಮ್ಮನೆ ಕೂರಿಸಿಕೊಂಡು ನಂತರ ಸಿಎಂ ಸ್ಥಾನದಿಂದ ಕೆಳಗಿಳಿದರು. ಬಿಜೆಪಿ ನೇತೃತ್ವದ ಸರ್ಕಾರ ತನ್ನ ಭರವಸೆಯನ್ನು ಉಳಿಸಿಕೊಳ್ಳಲು ವಿಫಲವಾದರೆ ಮತ್ತೆ ಅಂತಹುದೇ ಪರಿಸ್ಥಿತಿ ಬರಬಹುದು ಎಂದು ಹೇಳಿದರು.

ಭವಿಷ್ಯದಲ್ಲಿ ಸಮಾಜ ತಕ್ಕ ಪಾಠ ಕಲಿಸಲಿದೆ. ಮೀಸಲಾತಿಯ ವಿಷಯವು ಸಾಕಷ್ಟು ಹಳೆಯದಾಗಿದ್ದು, ಈ ಕುರಿತು ಸಾಕಷ್ಟು ಬಾರಿ ಸರ್ಕಾರದ ಮೇಲೆ ಒತ್ತಡ ಹೇರಲಾಗಿದೆ. ಅಲ್ಲದೆ ನಕಲಿ ಜಾತಿ ಪ್ರಮಾಣ ಪತ್ರ ದಂಧೆ ತಡೆಯಬೇಕು. ಮತ್ತು ತಪ್ಪಿತಸ್ಥರನ್ನು ನ್ಯಾಯಾಲಯದ ಮೂಲಕ ಶಿಕ್ಷಿಸಬೇಕು ಎಂದು ಸ್ವಾಮಿಜಿ ಹೇಳಿದರು. 

ಇದೇ ವೇಳೆ ನ.11 ರಂದು ಸರ್ಕಾರಿ ಕಾರ್ಯಕ್ರಮವಾಗಿ ಒನಕೆ ಓಬವ್ವ ಜಯಂತಿ ಹಾಗೂ ಐತಿಹಾಸಿಕ ಚಿತ್ರದುರ್ಗ ಕೋಟೆಯ ರಕ್ಷಣೆಯಲ್ಲಿ ಅವರ ಸೇವೆಯನ್ನುಸ್ವಾಮಿಜಿ ಸ್ಮರಿಸಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com