ಗೋವಾದಲ್ಲಿ ಕನ್ನಡ ಭವನ ಸ್ಥಾಪನೆಗೆ ರೂ.10 ಕೋಟಿ: ಸಿಎಂ ಬೊಮ್ಮಾಯಿ

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ರೂ.10 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಘೋಷಣೆ ಮಾಡಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ರೂ.10 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಈ ಭರವಸೆ ನೀಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತ್ತು.

ನಿಯೋಗದ ಭೇಟಿ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ ಅವಪು, "ಗೋವಾ ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದ ಬಹುತೇಕ ಜನರು ನೆಲೆಸಿದ್ದಾರೆ. ಅವರು ಹೊರನಾಡು ಗೋವಾದಲ್ಲಿ ಕನ್ನಡವನ್ನು ಉಳಿಸಿ ಬೆಳೆಸುತ್ತಿದ್ದಾರೆ. ಕನ್ನಡ ಸಂಸ್ಕೃತಿಯನ್ನು ಕಾಪಾಡುತ್ತಿದ್ದಾರೆ. ಆದರೆ ಕನ್ನಡಿಗರಿಗೆ ಅಲ್ಲಿ ನೆಲೆಯಿಲ್ಲ . ಹೀಗಾಗಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಸಿದ್ಧವಿದೆ. ಇದಕ್ಕೆ ಸೂಕ್ತ ಭೂಮಿಯನ್ನು ಗುರುತಿಸಿ ಡಿಪಿಆರ್ ಸಿದ್ಧಪಡಿಸಿ" ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವಂತೆಯೂ ಅಧಿಕಾರಿಗಳಿಗೆ ಆದೇಶಿಸಿದರು.

ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಗೋವಾ ಕನ್ನಡ ಮಹಾಸಂಘದ ಗೌರವ ಅಧ್ಯಕ್ಷ ಸಿದ್ದಣ್ಣ ಮೇಟಿ, ಹಾಗೂ ಪದಾಧಿಕಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com