ಕೋವಿಡ್-19 ಸಾಂದರ್ಭಿಕ ಚಿತ್ರ
ರಾಜ್ಯ
ಹಾಸನ: ಅರಕಲಗೂಡಿನಲ್ಲಿ 17 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್
ಅರಕಲಗೂಡು ತಾಲೂಕಿನ ಹೊನ್ನಾವಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕನಿಷ್ಠ 17 ವಿದ್ಯಾರ್ಥಿಗಳಿಗೆ ಗುರುವಾರ ಕೊರೋನಾ ಸೋಂಕು ಪತ್ತೆಯಾಗಿದೆ.
ಹಾಸನ: ಅರಕಲಗೂಡು ತಾಲೂಕಿನ ಹೊನ್ನಾವಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕನಿಷ್ಠ 17 ವಿದ್ಯಾರ್ಥಿಗಳಿಗೆ ಗುರುವಾರ ಕೊರೋನಾ ಸೋಂಕು ಪತ್ತೆಯಾಗಿದೆ.
ಆರೋಗ್ಯ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಶಾಲೆಗೆ ಧಾವಿಸಿ, ಸೋಂಕಿತ ವಿದ್ಯಾರ್ಥಿಗಳನ್ನು ಕೋವಿಡ್ ಕೇರ್ ಸೆಂಟರ್ ಗೆ ಸ್ಥಳಾಂತರಿಸಿದ್ದಾರೆ. ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಿರುವ ಆರೋಗ್ಯಾಧಿಕಾರಿಗಳು, ಒಂದು ವಾರದವರೆಗೂ ಕ್ವಾರಂಟೈನ್ ನಲ್ಲಿ ಇರಲು ಅವರಿಗೆ ಸೂಚಿಸಿದ್ದಾರೆ.
ಭೀತಿಗೊಂಡ ಪೋಷಕರು ಶಾಲೆಗೆ ದೌಡಾಯಿಸಿದ್ದು, ಘಟನೆಯಿಂದ ಆತಂಕಗೊಂಡು ತಮ್ಮ ಮಕ್ಕಳನ್ನು ಮನೆಗೆ ಕರೆದೊಯ್ದರು. ಸ್ಥಳೀಯ ಶಾಸಕ ಎ.ಟಿ. ರಾಮಸ್ವಾಮಿ ಶಾಲೆಗೆ ಭೇಟಿ ನೀಡಿ, ಈ ಸಂಬಂಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ