ಮಿಟ್ಟಹಳ್ಳಿಯಲ್ಲಿ ಕೇಳಿ ಬಂದ ಭಾರೀ ಶಬ್ಧ: ಭೂಕಂಪವಲ್ಲ ಎಂದ ಅಧಿಕಾರಿಗಳು, ಗ್ರಾಮಸ್ಥರಲ್ಲಿ ಆತಂಕ ದೂರಾಗಿಸಲು ಯತ್ನ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಿಟ್ಟಹಳ್ಳಿಯಲ್ಲಿ ಭೂಮಿಯಿಂದ ಮತ್ತೆ ಭಾರೀ ಶಬ್ದ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಬುಧವಾರ ಗ್ರಾಮಕ್ಕೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸುತ್ತಿರುವ ಜಿಲ್ಲಾಧಿಕಾರಿ ಆರ್.ಲತಾ.
ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸುತ್ತಿರುವ ಜಿಲ್ಲಾಧಿಕಾರಿ ಆರ್.ಲತಾ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಿಟ್ಟಹಳ್ಳಿಯಲ್ಲಿ ಭೂಮಿಯಿಂದ ಮತ್ತೆ ಭಾರೀ ಶಬ್ದ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಬುಧವಾರ ಗ್ರಾಮಕ್ಕೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭೂಮಿಯಿಂದ ಭಾರೀ ಶಬ್ಧ ಕೇಳಿ ಬಂದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ, ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಭೂವಿಜ್ಞಾನಿಗಳ ತಂಡದೊಂದಿಗೆ ಗ್ರಾಮಕ್ಕೆ ಭೇಟಿ ನೀಡಿದ್ದು, ಗ್ರಾಮಸ್ಥರೊಂದಿಗೆ ಮಾತನಾಡಿ, ಖುದ್ದು ಮಾಹಿತಿ ಸಂಗ್ರಹಿಸಿದರು.

ಇದು ಭೂಕಂಪವಲ್ಲ. ಗ್ರಾಮದ ಜನರು ಆತಂಕಪಡುವ ಅಗತ್ಯವಿಲ್ಲ. ಎಂದಿನಂತೆ ತಮ್ಮ ದೈನಂದಿನ ಕೆಲ ಕಾರ್ಯಗಳನ್ನು ಮುಂದುವರೆಸಬಹುದು ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ಹೇಳಿದ್ದಾರೆ.

ಭೂಕಂಪವಲ್ಲದಿದ್ದರೂ ಗ್ರಾಮದಲ್ಲಿ ಭೂವಿಜ್ಞಾನಿಗಳ ತಂಡ ನೆಲೆಯೂರಿದ್ದು, ವಾರಗಳ ಕಾಲ ಪರಿಶೀಲನೆ ನಡೆಸಲಿದ್ದಾರೆ. ಕೆಎಸ್‌ಎನ್‌ಡಿಎಂಸಿ ಅಧಿಕಾರಿಗಳೂ ಈ ಕುರಿತು ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದಲ್ಲಿ (ಕೆಎಸ್‌ಎನ್‌ಡಿಎಂಸಿ) ರಿಕ್ಟರ್ ಮಾಪಕದಲ್ಲಿ ಯಾವುದೇ ತೀವ್ರತೆ ದಾಖಲಾಗಿಲ್ಲ ಚಿಕ್ಕಬಳ್ಳಾಪುರ ಜಿಲ್ಲೆ ಉಪ ಆಯುಕ್ತರು ಹೇಳಿದ್ದಾರೆ.

3-4 ಬಾರಿ ಭೂಮಿಯಲ್ಲಿ ಭಾರೀ ಶಬ್ಧ ಕೇಳಿ ಬಂದಿತ್ತು. ಭೂಮಿ ಅಲುಗಾಡಿದ ಅನುಭವವೂ ಆಗಿತ್ತು. ಇದರಿಂದ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದರು. ಇದೀಗ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಧೈರ್ಯ ಬಂದಂತಾಗಿದೆ ಎಂದು ಮಿಟ್ಟಹಳ್ಳಿಯ ನಿವಾಸಿ ಚಂದ್ರ ಶೇಖರ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com