ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಸರ್ಕಾರದ ಈ ನೀತಿಗೆ ಹೈಕೋರ್ಟ್ ಅಸಮಾಧಾನ

ರಾಜ್ಯದ ಪದವಿ ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಕನ್ನಡ ಕಡ್ಡಾಯ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​, ಸರ್ಕಾರದ ನೀತಿಗೆ ಅಸಮಾಧಾನ ವ್ಯಕ್ತಪಡಿಸಿತು. ಇದರಲ್ಲಿ ಏಕೆ ರಾಜಕೀಯ ಬೆರೆಸುತ್ತಿದ್ದೀರಿ? ಈ ನೀತಿಯಿಂದಾಗಿ ಎಷ್ಟು ವಿದ್ಯಾರ್ಥಿಗಳು ಹೊರಹೋಗಿದ್ದಾರೆ ಗೊತ್ತೇ? ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನಿಸಿತು.

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕಡ್ಡಾಯಕ್ಕೆ ಅವಕಾಶವಿದೆಯೇ?
ಹೊರರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಕಡ್ಡಾಯಗೊಳಿಸಬಹುದೇ? ಉನ್ನತ ಶಿಕ್ಷಣದಲ್ಲಿ ಕನ್ನಡ ಕಡ್ಡಾಯಗೊಳಿಸಲು ಅವಕಾಶವಿದೆಯೇ? ಎಂದು ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ ಮಾಡಿತು.

ಕನ್ನಡ ಭಾಷೆ ಕಲಿಕೆ ಪ್ರೋತ್ಸಾಹಿಸಲು ಅವಕಾಶವಿದೆ ಎಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರದ ವಕೀಲರ ಹೇಳಿದರು. ಈ ಬಗ್ಗೆ ಸರ್ಕಾರ ವಾದ ಮಂಡನೆಗೆ ಕಾಲಾವಕಾಶ ಕೋರಿದ್ದು, ವಿಚಾರಣೆಯನ್ನು ನವೆಂಬರ್ 15ಕ್ಕೆ ಮುಂದೂಡಲಾಗಿದೆ.

ಆನ್ ಲೈನ್ ಗೇಮ್ ನಿಷೇಧ ವಿಚಾರ
ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದು ರಾಜ್ಯದಲ್ಲಿ ಎಲ್ಲಾ ಬಗೆಯ ಆನ್ ಲೈನ್ ಗೇಮ್​ಗಳನ್ನು ರಾಜ್ಯ ಸರ್ಕಾರ ನಿಷೇಧಿಸಿದೆ. ರಾಜ್ಯ ಸರ್ಕಾರದ ಈ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಇಂದು ಹೈಕೋರ್ಟ್​ನಲ್ಲಿ ನಡೆಸಲಾಯಿತು.

ಅರ್ಜಿಗಳು ಇತ್ಯರ್ಥ ಆಗುವವರೆಗೆ ಆನ್ ಲೈನ್ ಗ್ಯಾಂಬ್ಲಿಂಗ್ ಮತ್ತು ಗೇಮಿಂಗ್ ಕಂಪನಿಗಳ ವಿರುದ್ದ ಬಲವಂತದ ಕ್ರಮವಿಲ್ಲ. ಅಡ್ವೊಕೇಟ್ ಜನರಲ್ ನ್ಯಾಯಾಲಯಕ್ಕೆ ನೀಡಿರುವ ಭರವಸೆ ಮುಂದುವರಿಯುತ್ತದೆ ಎಂದು ಹೇಳಿ ಹೈಕೋರ್ಟ್​ ನವೆಂಬರ್‌ 18ಕ್ಕೆ ವಿಚಾರಣೆ ಮೂಂದೂಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com