ಬಿಟಿಎಸ್ 2021: ಮೊದಲ ಬಾರಿಗೆ ಯುಎಇ, ವಿಯಟ್ನಾಂ, ಆಫ್ರಿಕಾ, ಯುರೋಪಿಯನ್ ಒಕ್ಕೂಟ ಭಾಗಿ- ಅಶ್ವತ್ಥ ನಾರಾಯಣ

ನವೆಂಬರ್ 17 ರಿಂದ 19ರವರೆಗೆ ನಗರದಲ್ಲಿ ನಡೆಯಲಿರುವ 24ನೇ ವರ್ಷದ ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ (ಬಿಟಿಎಸ್ -2021) ಸಂಯುಕ್ತ ಅರಬ್ ಸಂಸ್ಥಾನ, ವಿಯಟ್ನಾಂ, ಯುರೋಪಿಯನ್ ಯೂನಿಯನ್ ಮತ್ತು ದಕ್ಷಿಣ ಆಫ್ರಿಕಾ ದೇಶಗಳು ಪಾಲ್ಗೊಳ್ಳುತ್ತಿವೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಸಮಿಟ್ ನ ಮಾಹಿತಿಯನ್ನೊಳಗೊಂಡ ಕಿರುಹೊತ್ತಿಗೆ ಬಿಡುಗಡೆ ಮಾಡಿದ ಸಚಿವ ಅಶ್ವತ್ಥ ನಾರಾಯಣ ಮತ್ತಿತರರು
ಸಮಿಟ್ ನ ಮಾಹಿತಿಯನ್ನೊಳಗೊಂಡ ಕಿರುಹೊತ್ತಿಗೆ ಬಿಡುಗಡೆ ಮಾಡಿದ ಸಚಿವ ಅಶ್ವತ್ಥ ನಾರಾಯಣ ಮತ್ತಿತರರು

ಬೆಂಗಳೂರು: ನವೆಂಬರ್ 17 ರಿಂದ 19ರವರೆಗೆ ನಗರದಲ್ಲಿ ನಡೆಯಲಿರುವ 24ನೇ ವರ್ಷದ ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ (ಬಿಟಿಎಸ್ -2021) ಇದೇ ಮೊದಲ ಬಾರಿಗೆ ಸಂಯುಕ್ತ ಅರಬ್ ಸಂಸ್ಥಾನ, ವಿಯಟ್ನಾಂ, ಯುರೋಪಿಯನ್ ಯೂನಿಯನ್ ಮತ್ತು ದಕ್ಷಿಣ ಆಫ್ರಿಕಾ ದೇಶಗಳು ಪಾಲ್ಗೊಳ್ಳುತ್ತಿವೆ ಎಂದು ಐಟಿ,ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಜಾಗತಿಕ ನಾವೀನ್ಯತಾ ಮೈತ್ರಿಕೂಟ ಕೈಗೊಂಡಿರುವ ರಚನಾತ್ಮಕ ಕ್ರಮಗಳಿಂದಾಗಿ 30ಕ್ಕೂ ಹೆಚ್ಚು ದೇಶಗಳೊಂದಿಗೆ ಶಿಕ್ಷಣ, ನವೋದ್ಯಮ, ಸಂಶೋಧನೆ ಹಾಗೂ ಅಭಿವೃದ್ಧಿ ಸಹಭಾಗಿತ್ವಕ್ಕೆ ಮುಂದಡಿ ಇಡಲಾಗಿದೆ ಎಂದರು.

ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ ಇದೇ ಪ್ರಥಮ ಬಾರಿಗೆ ಅಮೆರಿಕ- ಭಾರತ ವಾಣಿಜ್ಯ ಸಮಿತಿ ಮತ್ತು ವರ್ಚುಯಲ್ ರೂಪದಲ್ಲಿ ಆಸ್ಟ್ರೇಲಿಯಾದ ಸಿಡ್ನಿ ವಾಣಿಜ್ಯ ವಿಚಾರ ವಿನಿಮಯ ಶೃಂಗಸಭೆ ಮತ್ತು ಬಿಟಿಎಸ್ ಪ್ರತಿನಿಧಿಗಳು ಪಾಲ್ಗೊಳ್ಳುತ್ತಿದ್ದಾರೆ. ಈ ಸಂಘಟನೆಗಳು ರಾಜ್ಯದೊಂದಿಗೆ ತಮ್ಮ ತಂತ್ರಜ್ಞಾನ ಪರಿಣತಿಯನ್ನು ಪರಸ್ಪರ ನೆಲೆಯಲ್ಲಿ ಪ್ರದರ್ಶಿಸಲಿವೆ. ಅಮೆರಿಕದ ಜೊತೆಗಿನ ಸಹಭಾಗಿತ್ವ ನಾವೀನ್ಯತೆಯ ಕ್ಷೇತ್ರದಲ್ಲಿ ಮತ್ತಷ್ಟು ಅಂತಾರಾಷ್ಟ್ರೀಯ ಸಹಕಾರಕ್ಕೆ ಅವಕಾಶ ಸೃಷ್ಟಸಲಿದೆ ಎಂದು ಅವರು ಆಶಾಭಾವನೆ ವ್ಯಕ್ತಪಡಿಸಿದರು. ಬಿಟಿಎಸ್ 2021ರಲ್ಲಿ 30ಕ್ಕೂ ಅಧಿಕ ದೇಶಗಳು ಭಾಗವಹಿಸುತ್ತಿವೆ.

ಆಸ್ಟ್ರೇಲಿಯಾ ನ್ಯೂ ಸೌತ್ ವೇಲ್ಸ್ ಪ್ರಾಂತ್ಯದ ಉದ್ಯೋಗ, ಹೂಡಿಕೆ ಮತ್ತು ಪ್ರವಾಸೋದ್ಯಮ ಸಚಿವ ಸ್ಟುವರ್ಟ್ ಏಯರ್ಸ್, ಜರ್ಮನಿಯ ನಾರ್ತ್ ರೀನ್ ವೆಸ್ಟ್ ಫಾಲಿಯಾ ಪ್ರಾಂತ್ಯದ ಆರ್ಥಿಕ, ನಾವೀನ್ಯತೆ ಮತ್ತು ಡಿಜಿಟಲೀಕರಣ ಸಚಿವ ಪ್ರೊಫೆಸರ್ ಆಂಡ್ರಿಯಾಸ್ ಪಿಂಕ್ ವರ್ಟ್, ಫಿನ್ಲೆಂಡಿನ  ಸಾರಿಗೆ ಮತ್ತು ಸಂಪರ್ಕ ಸಚಿವ ಟಿಮೋ ಹಕ್ಕಾ ಹಾಗೂ ವಿಯಟ್ನಾಂನ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಮಾಜಿ ಸಚಿವ ನುಯೆನ್ ಕ್ವಾನ್ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com