ನಗರದಲ್ಲಿ 5 ಲಕ್ಷ ಜನರು ನಿಗದಿತ ಸಮಯದಲ್ಲಿ 2ನೇ ಡೋಸ್ ಕೋವಿಡ್ ಲಸಿಕೆ ಪಡೆದಿಲ್ಲ!

ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದವರು 2ನೇ ಡೋಸ್ ಪಡೆಯಲು ಹಿಂದೇಟು ಹಾಕುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, 2ನೇ ಡೋಸ್ ಲಸಿಕೆ ಹಾಕಲು ಆರೋಗ್ಯ ಇಲಾಖೆ ಹರಸಾಹಸ ಪಡುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೊರೊನಾ ಸೋಂಕಿನ ತೀವ್ರತೆ ತಡೆಯಬೇಕಾದರೆ ರಾಮಬಾಣವಾಗಿದೆ. ಮೊದಮೊದಲು ಕೋವಿಡ್ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದ ಜನರು ನಂತರ ಜಾಗೃತಿಯಿಂದ ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬಂದರು. ಇದೀಗ ಮೊದಲ ಡೋಸ್ ಪಡೆದವರು 2ನೇ ಡೋಸ್ ಪಡೆಯಲು ಹಿಂದೇಟು ಹಾಕುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, 2ನೇ ಡೋಸ್ ಲಸಿಕೆ ಹಾಕಲು ಆರೋಗ್ಯ ಇಲಾಖೆ ಹರಸಾಹಸ ಪಡುತ್ತಿದೆ.

ಅವಧಿ ಮುಗಿದರೂ5 ಹಲವಾರು ಜನರು 2ನೇ ಡೋಸ್ ಪಡೆಯಲು ಹಿಂದೇಟು ಹಾಕಿದ್ದು, ರಾಜ್ಯದಲ್ಲಿ ಒಟ್ಟು 5 ಲಕ್ಷಕ್ಕೂ ಹೆಚ್ಚು ಮಂದಿ 2ನೇ ಡೋಸ್​ ವ್ಯಾಕ್ಸಿನ್ ಪಡೆಯದವರಿದ್ದಾರೆಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.

ಈ ನಡುವೆ ಎರಡನೇ ಡೋಸ್ ತೆಗೆದುಕೊಳ್ಳದ ಜನರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಕೆಲಸದ ಸ್ಥಳಗಳಿಗೆ ಪ್ರವೇಶಿಸುವುದನ್ನು ನಿಷೇಧಿಸುವಂತೆ ಇತರೆ ರಾಜ್ಯಗಳು ಹೊರಡಿಸಿರುವ ಆದೇಶದಂತೆ ಹಾಗೂ ಎರಡನೇ ಡೋಸ್ ಲಸಿಕೆ ಪಡೆಯದವರಿಗೆ ಉಚಿತ ಚಿಕಿತ್ಸೆ ನೀಡಲಾಗುವುದಲ್ಲ ಎಂಬ ಆದೇಶವನ್ನು ರಾಜ್ಯದಲ್ಲಿ ಹೊರಡಿಸುವಂತೆ ತಾಂತ್ರಿಕ ಸಲಹಾ ಸಮಿತಿಯು (ಟಿಎಸಿ) ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಕಳೆದ ವಾರದವರೆಗೆ 6 ಲಕ್ಷ ಜನರು ಎರಡನೇ ಡೋಸ್ ಲಸಿಕೆ ಪಡೆಯಬೇಕಿತ್ತು. ಇದೀಗ ಮನೆ ಮನೆಗಳಿಗೆತೆರಳಿ ಲಸಿಕೆ ಪಡೆಯುವಂತೆ ಜನರಿಗೆ ತಿಳಿಸಲಾಗುತ್ತಿದೆ. ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಪಡೆಯುವ ಅಗತ್ಯವಿಲ್ಲ ಎಂದು ಕೆಲವರು ಹೇಳುತ್ತಿದ್ದರೆ, ಮತ್ತೆ ಕೆಲವರು ಲಸಿಕೆ ಪಡೆದರೆ ಅಡ್ಡ ಪರಿಣಾಮಗಳಾಗುತ್ತವೆ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಾರೆಂದು ತ್ರಿಲೋಕ್ ಚಂದ್ರ ಅವರು ಹೇಳಿದ್ದಾರೆ.

ನಗರದಲ್ಲಿ ಕೇವಲ ಶೇ.58 ರಷ್ಟು ಜನರು ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ಮೊದಲ ಡೋಸ್ ಲಸಿಕೆ ಪಡೆದು ಅವಧಿ ಮುಗಿದರೂ ಸಾಕಷ್ಟು ಜನರು ಲಸಿಕೆಗಳನ್ನು ಪಡೆದುಕೊಂಡಿಲ್ಲ. ಮೊದಲ ಡೋಸ್ ಲಸಿಕೆ ಪಡೆದವರಿಗೆ ಕರೆ ಮಾಡಿ ಎರಡನೇ ಡೋಸ್ ಲಸಿಕೆ ಪಡೆದುಕೊಳ್ಳುವಂತೆ  ಆರೋಗ್ಯ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೋವಿಡ್ ವಾರ್ ರೂಮ್ ನಲ್ಲಿರುವ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ತಿಳಿಸಿದ್ದಾರೆ.

ಕೊರೋನಾ ಸಾಂಕ್ರಾಮಿಕ ರೋಗ ಇನ್ನೂ ಅಂತ್ಯಗೊಂಡಿಲ್ಲ. ಕೋವಿಡ್ ಲಕ್ಷಣ ಇರುವ ಜನರು ಕೂಡಲೇ ತಾವೇ ಮುಂದೆ ಬಂದು ಪರೀಕ್ಷೆ ಮಾಡಿಸಿಕೊಳ್ಳಬೇಕು. ಸೋಂಕು ಕಡಿಮೆಯಾಗಿದೆ ಎಂದು ಸಾಕಷ್ಟು ಜನರು ಮಾಸ್ಕ್ ಧರಿಸುವುದನ್ನು ನಿಲ್ಲಿಸಿದ್ದಾರೆ. ಮಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಸಾಕಷ್ಟು ಜನರು ತಮ್ಮ ಆರೋಗ್ಯವನ್ನು ನಿರ್ಲಕ್ಷಿಸುತ್ತಿದ್ದಾರೆ. ಸೂಕ್ತ ಸಮಯಕ್ಕೆ ಚಿಕಿತ್ಸೆಗಳನ್ನು ಪಡೆಯುತ್ತಿಲ್ಲ ಎಂದು ಗುಪ್ತಾ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com