ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ ಕಾಟ, 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮತ್ತೆ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮತ್ತೆ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾಯಭಾರ ಕುಸಿತದ ಪರಿಣಾಮ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ. 

ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು, ಶಿವಮೊಗ್ಗ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಇಂದಿನಿಂದ ಇದೇ ನವೆಂಬರ್ 16 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ತಮಿಳುನಾಡಿನ ಚೆನ್ನೈ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಗೆ ಕಾರಣವಾಗಿದ್ದ ವಾಯುಭಾರ ಕುಸಿತ ಈಗ ದುರ್ಬಲಗೊಂಡಿದೆ. ಆದರೆ ಮೇಲ್ಮೈ ಸುಳಿಗಾಳಿ, ಆಂಧ್ರ ಪ್ರದೇಶ, ಒಡಿಶಾ ಮೂಲಕ ಪಶ್ಚಿಮ ಬಂಗಾಳದ ತನಕ ಹಾದುಹೋಗಿರುವ ಟ್ರಫ್‌ ಹಾಗೂ ಆಗ್ನೇಯ ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನವೆಂಬರ್‌ 16ರವರೆಗೆ ಮಳೆಯಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com