ರಾಜ್ಯದಲ್ಲಿ ಇಂದು ಕೊರೋನಾದಿಂದ ಒಬ್ಬರು ಸಾವು, ಬೆಂಗಳೂರಿನಲ್ಲಿ 118 ಸೇರಿ 171 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 171 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 171 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,92,021ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಒಬ್ಬರು ಮಾತ್ರ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38146ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 118 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,54,093ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 255 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,45,934ಕ್ಕೆ ಏರಿಕೆಯಾಗಿದೆ. ಇನ್ನು 7912 ಸಕ್ರೀಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com