ಬೆಂಗಳೂರಿನಲ್ಲಿ ಧಾರಾಕಾರ ಮಳೆ, ರಾಜಧಾನಿಯಲ್ಲಿ ಇನ್ನೂ ಎರಡು ದಿನ ವರುಣನ ಅಬ್ಬರ
ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದ್ದು, ದಿನದ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಯಿತು.
Published: 15th November 2021 07:36 PM | Last Updated: 15th November 2021 07:36 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದ್ದು, ದಿನದ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಯಿತು.
ವಿಧಾನಸೌಧ, ಕೆ.ಆರ್.ವೃತ್ತ, ಶಿವಾಜಿನಗರ, ಲಾಲ್ ಬಾಗ್ ರಸ್ತೆ, ಕೆಂಗಲ್ ಹನುಮಂತಯ್ಯ ರಸ್ತೆ, ಜಯನಗರ, ಜೆ.ಪಿ.ನಗರ, ಮೆಜೆಸ್ಟಿಕ್, ಸಿಟಿ ಮಾರುಕಟ್ಟೆ, ಹೆಬ್ಬಾಳ, ಎಚ್ ಎಎಲ್ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ.
ಇದನ್ನು ಓದಿ: ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ: ಚೆನ್ನೈ ಮತ್ತಿತರ ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್ ಘೋಷಣೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಇನ್ನೂ ಎರಡು ದಿನ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.
ರಾಮನಗರ ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ತುಮಕೂರು ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ , ಶಿವಮೊಗ್ಗ ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದ್ದು, ಮಂಗಳವಾರದವರೆಗೆ ಯೆಲ್ಲೋ ಅಲರ್ಟ್’ಘೋಷಿಸಲಾಗಿದೆ ಎಂದು ವರದಿ ಹೇಳಿದೆ.