ಪದವಿ ಕಾಲೇಜುಗಳಲ್ಲಿ ಕನ್ನಡ ಕಲಿಕೆ‌ ವಿಚಾರಣೆ ನ.30ಕ್ಕೆ ಮುಂದೂಡಿದ ಹೈಕೋರ್ಟ್

ರಾಜ್ಯದ ಪದವಿ ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಮಾಡುವ ವಿಚಾರಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಹೈಕೋರ್ಟ್ ನ.30ಕ್ಕೆ ಮುಂದೂಡಿದೆ.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಮಾಡುವ ವಿಚಾರಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಹೈಕೋರ್ಟ್ ನ.30ಕ್ಕೆ ಮುಂದೂಡಿದೆ.

ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಮಾಡಿರುವ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ, ‘ಸಂಸ್ಕೃತ ಭಾರತಿ ಟ್ರಸ್ಟ್’, ಸಲ್ಲಿಸಿದ್ದ  ಅರ್ಜಿಯ ವಿಚಾರಣೆಯನ್ನು ಮೈಗೆತ್ತಿಕೊಂಡ ಹೈಕೋರ್ಟ್ ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ವಿಚಾರದಲ್ಲಿ  ರಾಜ್ಯ ಸರ್ಕಾರ ಹೊರಡಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಯಾವ ನಿಲುವು ತಳೆದಿದ್ದೀರಿ ಎಂಬುದನ್ನು ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ, ಹೈಕೋರ್ಟ್ ಸೂಚನೆ ನೀಡಿದೆ.

‘ಸರ್ಕಾರದ ಈ ಆದೇಶ ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರುದ್ಧವಾಗಿಲ್ಲ.ವಿದ್ಯಾರ್ಥಿಗಳಿಗೆ ಕನ್ನಡವನ್ನು ಒಂದು ಭಾಷೆಯಾಗಿ ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಲಾಗಿದ್ದು, ಕನ್ನಡ ಗೊತ್ತಿಲ್ಲದವರಿಗೆ ಸರಳವಾಗಿ ಕನ್ನಡ ಕಲಿಸಲು ಪ್ರತ್ಯೇಕ ಪಠ್ಯವನ್ನೂ ರೂಪಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಮರಾಠಿ ಭಾಷೆ ಕಲಿಸುವ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯ ಪ್ರವೇಶಿಸಲು ನಿರಾಕರಿಸಿದೆ ಎಂಬುದನ್ನು  ವಕೀಲ ಎಜಿ ಪ್ರಭುಲಿಂಗ ನಾವಾದಗಿ  ಇಂದ  ನ್ಯಾಯಪೀಠದ ಗಮನಕ್ಕೆ ತಂದಾಗ ಈ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರವು ತನ್ನ ನಿಲುವು ಸ್ಪಷ್ಟಪಡಿಸುವಂತೆ ಹೈಕೋರ್ಟ್  ಸೂಚಿಸಿ  ನವೆಂಬರ್  30ಕ್ಕೆ  ವಿಚಾರಣೆ ಮುಂದೂಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com