ರಾಜ್ಯದಲ್ಲಿ ಮಕ್ಕಳ ಮೇಲಿನ ಸೈಬರ್ ಅಪರಾಧ ಪ್ರಕರಣಗಳು ಶೇ.1,340ರಷ್ಟು ಹೆಚ್ಚಳ!

ರಾಜ್ಯದಲ್ಲಿ ಹಿಂದಿನ ವರ್ಷಕ್ಕಿಂತಲೂ 2020ರಲ್ಲಿ ಮಕ್ಕಳ ಮೇಲಿನ ಸೈಬರ್ ಅಪರಾಧಗಳ ಪ್ರಕರಣಗಳ ಸಂಖ್ಯೆಯಲ್ಲಿ ಶೇಕಡಾ 1,340 ರಷ್ಟು ಹೆಚ್ಚಳವಾಗಿರುವುದು ಕಂಡು ಬಂದಿದೆ. ಇದರೊಂದಿಗೆ ದೇಶದಲ್ಲಿ ಅತಿ ಹೆಚ್ಚು ಅಪರಾಧಗಳನ್ನು ವರದಿ ಮಾಡುವ ರಾಜ್ಯಗಳಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಹಿಂದಿನ ವರ್ಷಕ್ಕಿಂತಲೂ 2020ರಲ್ಲಿ ಮಕ್ಕಳ ಮೇಲಿನ ಸೈಬರ್ ಅಪರಾಧಗಳ ಪ್ರಕರಣಗಳ ಸಂಖ್ಯೆಯಲ್ಲಿ ಶೇಕಡಾ 1,340 ರಷ್ಟು ಹೆಚ್ಚಳವಾಗಿರುವುದು ಕಂಡು ಬಂದಿದೆ. ಇದರೊಂದಿಗೆ ದೇಶದಲ್ಲಿ ಅತಿ ಹೆಚ್ಚು ಅಪರಾಧಗಳನ್ನು ವರದಿ ಮಾಡುವ ರಾಜ್ಯಗಳಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ.

ರಾಷ್ಟ್ರೀಯ ಅಪರಾಧಗಳ ದಾಖಲೆ ಬ್ಯೂರೋ(ಎನ್‌ ಸಿಆರ್‌ಬಿ)ದ ವರದಿಯಲ್ಲಿ ಈ ವಂಶ ಬೆಳಕಿಗೆ ಬಂದಿದ್ದು, ಹೆಚ್ಚು ಅಪರಾಧಗಳು ನಡೆ ದಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ 2020 ರಲ್ಲಿ ಮಕ್ಕಳ ಮೇಲೆ ಒಟ್ಟು 144 ಸೈಬರ್ ಅಪರಾಧಗಳು ವರದಿಯಾಗಿವೆ, 2019ಕ್ಕೆ ಹೋಲಿಕೆ ಮಾಡಿದರೆ 2020ರಲ್ಲಿ ಮಕ್ಕಳ ಮೇಲಿನ ಅಪರಾಧ ಪ್ರಕರಣಗಳು ಶೇ.1,340ರಷ್ಟು ಹೆಚ್ಚಾಗಿರುವುದು ಕಂಡು ಬಂದಿದೆ.

ಹೆಚ್ಚಿನ ಪ್ರಕರಣಗಳು ಮಕ್ಕಳನ್ನು ಲೈಂಗಿಕ ಕ್ರಿಯೆಗಳಲ್ಲಿ ತೊಡಗಿಸಿರುವುದು, ಅದರ ವಿಡಿಯೋಗಳನ್ನು ರವಾನಿಸಿರುವುದು ಕಂಡು ಬಂದಿದೆ. ರಾಜ್ಯದಲ್ಲಿ ವರದಿಯಾದ 144 ಪ್ರಕರಣಗಳಲ್ಲಿ 122 ಮಕ್ಕಳನ್ನು ಸೈಬರ್ ಪೊನೋಗ್ರಫಿಗೆ ಸಂಬಂಧಿಸಿದ್ದಾಗಿದೆ ಎಂದು ತಿಳಿದುಬಂದಿದೆ.

ದೇಶದಲ್ಲಿ ಪತ್ತೆಯಾಗಿರುವ ಅತೀ ಹೆಚ್ಚು ಪ್ರಕರಣಗಳ ಪೈಕಿ ಮಹಾರಾಷ್ಟ್ರ (207) ಮೊದಲ ಸ್ಥಾನದಲ್ಲಿದ್ದರೆ, ಉತ್ತರ ಪ್ರದೇಶ (197) ಎರಡನೇ ಸ್ಥಾನ,  ಕರ್ನಾಟಕ ಮೂರನೇ ಸ್ಥಾನದಲ್ಲಿದೆ ಎಂದು ಎನ್‌ಸಿಆರ್‌ಬಿ ಡೇಟಾ ಬಹಿರಂಗಪಡಿಸಿದೆ.

ನಂತರ ಸ್ಥಾನವನ್ನು ಕೇರಳ (126), ಮತ್ತು ಒಡಿಶಾ (71) ಪಡೆದುಕೊಂಡಿದೆ. ಈ ಐದು ರಾಜ್ಯಗಳು ಅತೀ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ವರದಿಯಾಗಿರುವ ಮೊದಲ ಐದು ರಾಜ್ಯಗಳಾಗಿವೆ.

ಸಾಂಕ್ರಾಮಿಕ ರೋಗದ ಬಳಿಕ ಘೋಷಣೆಯಾದ ಲಾಕ್ಡೌನ್ ಬಳಿಕ ಪ್ರಕರಣಗಳ ಸಂಖ್ಯೆ ಹೆಚ್ಚಾಗ ತೊಡಗಿತು. ನಿರ್ಬಂಧಗಳನ್ನು ಹೇರಿದ್ದರಿಂದ ಜನರು ಮನೆಯೊಳಗೇ ಇರುವಂತಾಗಿತ್ತು. ಇದರಿಂದ ಅಪರಾಧಿಗಳು ಅಪರಾಧ ಕೃತ್ಯಗಳಲ್ಲಿ ತೊಡಗಿಕೊಳ್ಳಲು ಅವಕಾಶ ದೊರಕಿದಂತಾಗಿತು ಎಂದು ತಜ್ಞರು ಹೇಳಿದ್ದಾರೆ.

ಮಕ್ಕಳು ತಮ್ಮ ವೈಯಕ್ತಿಕ ಮಾಹಿತಿಗಳನ್ನು ಹಂಚಿಕೊಳ್ಳುವುದನ್ನು ನಿಲ್ಲಿಸಬೇಕು...
ಆನ್‌ಲೈನ್ ತರಗತಿ ಹಿನ್ನೆಲೆಯಲ್ಲಿ ಇಂಟರ್ನೆಂಟ್'ನ್ನು ಮಕ್ಕಳು ಹೆಚ್ಚಾಗಿ ಬಳಸುತ್ತಿದ್ದು, ಇದು ಪ್ರಕರಣಗಳು ಹೆಚ್ಚಾಗಲು ಕಾರಣವಾಗಿದೆ. ಮಕ್ಕಳಿಗೆ ಅವರ ಶಿಕ್ಷಣಕ್ಕಾಗಿ ಮೊಬೈಲ್ ಫೋನ್‌ಗಳು ಅಥವಾ ಟ್ಯಾಬ್ಲೆಟ್‌ಗಳಂತಹ ಗ್ಯಾಜೆಟ್‌ಗಳನ್ನು ಅನಿವಾರ್ಯವಾಗಿ ಒದಗಿಸುವುದರಿಂದ ಪ್ರಕರಣಗಳು ಹೆಚ್ಚಾಗುತ್ತಿವೆ ಮಕ್ಕಳ ಹಕ್ಕುಗಳ ಟ್ರಸ್ಟ್‌ನ ನಿರ್ದೇಶಕ ಎನ್ ಅಗಸಿಂಹ ಜಿ ರಾವ್ ಅವರು ಹೇಳಿದ್ದಾರೆ.

ಕೆಲ ಅಹಿತಕರ ಘಟನೆಗಳು ಸಂಭವಿಸಿದ ಹಿನ್ನೆಲೆಯಲ್ಲಿ ಸಾಕಷ್ಟು ಪೋಷಕರು ಪ್ರಕರಣ ದಾಖಲಿಸಲು ಮುಂದಾಗುತ್ತಿಲ್ಲ. 8 ವರ್ಷದ ಮಕ್ಕಳೂ ಕೂಡ ಬಲಿಪಶುಗಳಾಗುತ್ತಿರುವುದು ಆತಂಕವನ್ನು ಹೆಚ್ಚು ಮಾಡುತ್ತಿದೆ. ಇಂತಹ ಪ್ರಕರಣಗಳಿಗೆ ಪೋಷಕರೂ ಕೂಡ ಒಂದೆಡೆ ಕಾರಣಕರ್ತರಾಗುತ್ತಿದ್ದಾರೆ. ಕೆಲ ಪೋಷಕರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಮಕ್ಕಳ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದು, ಸೈಬರ್ ಅಪರಾಧಿಗಳ ಗಮನ ಸೆಳೆಯುತ್ತಿದೆ. ಶಿಕ್ಷಕರು, ಪೋಷಕರು ಹಾಗೂ ಸರ್ಕಾರ ಮಕ್ಕಳು ಸೈಬರ್ ಅಪರಾಧ ಪ್ರಕರಣಗಳಿಗೆ ಗುರಿಯಾಗದಂತೆ ಮಾಡಲು ಸಹಯೋಗದೊಂದಿಗೆ ಪ್ರಯತ್ನಗಳ ನಡೆಸಬೇಕು ಎಂದು ತಿಳಿಸಿದ್ದಾರೆ.

ಮಕ್ಕಳಿಗೆ ತಮ್ಮ ಗ್ಯಾಜೆಟ್‌ಗಳನ್ನು ಬಳಸುವಾಗ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳನ್ನು ಶಾಲೆಗಳಲ್ಲಿ ಕಲಿಸಬೇಕು. ಅಪರಿಚಿತ ವ್ಯಕ್ತಿಗಳು ಕಳುಹಿಸುವ ಸಂದೇಶಗಳು ಅಥವಾ ಫೋಟೋಗಳಿಗೆ ಪ್ರತಿಕ್ರಿಯಿಸದಂತೆ ತಿಳಿಸಬೇಕು ಎಂದು ಸಲಹೆ ನೀಡಿದರು.

ಜನರು, ವಿಶೇಷವಾಗಿ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಏನನ್ನು ಹಂಚಿಕೊಳ್ಳುತ್ತಾರೆ ಎಂಬುದರ ಬಗ್ಗೆ ಜಾಗರೂಕರಾಗಿರಬೇಕು ಎಂದು ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಸಂದೀಪ್ ಪಾಟೀಲ್ ಹೇಳಿದ್ದಾರೆ.

"ಡಿಜಿಟಲ್ ಪ್ರಪಂಚದೊಂದಿಗೆ ವ್ಯವಹರಿಸುವಾಗ ಅದರ ನ್ಯೂನತೆಗಳನ್ನೂ ತಿಳಿಯಬೇಕು. ಮಕ್ಕಳು ತಮ್ಮ ಫೋನ್ ನಂಬರ್ ಹಾಗೂ ವಿಳಾಸಗಳಂತಹ ವೈಯಕ್ತಿಕ ವಿವರಗಳನ್ನು ಹಂಚಿಕೊಳ್ಳಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತ ವ್ಯಕ್ತಿಗಳೊಂದಿಗೆ ಮಾತನಾಡುವುದು, ಸಂದೇಶ ರವಾನಿಸುವುದು ಮಾಡಿದರೆ ಬಲಿಪಶುಗಳಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com