ಐಟಿ-ಬಿಟಿ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ
ಐಟಿ-ಬಿಟಿ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ

ಸ್ಟೆಮ್ ಯೇತರ ಶಿಕ್ಷಣ ಸಂಸ್ಥೆಗಳಲ್ಲಿ ಸಹ ಆರ್ಟಿಫಿಷಿಯಲ್ ಇಂಟೆಲಿಜೆಲ್ಸ್(ಎಐ), ಐಒಟಿ ಕಲಿಕೆ: ಡಾ. ಸಿ ಎನ್ ಅಶ್ವಥ್ ನಾರಾಯಣ

ಇತ್ತೀಚೆಗೆ ಸೈಬರ್ ಕ್ರೈಂ ಹೆಚ್ಚುತ್ತಿರುವ ಸಂದರ್ಭದಲ್ಲಿ ರಕ್ಷಣಾ ಇಲಾಖೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೊತ್ತಿನಲ್ಲಿ ಕರ್ನಾಟಕದಲ್ಲಿ ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಸೈಬರ್ ಸೆಕ್ಯುರಿಟಿ ಬಗ್ಗೆ ಕಲಿಯಬೇಕೆಂದು ಸರ್ಕಾರ ನಿಯಮ ಜಾರಿಗೆ ತರುತ್ತಿದೆ. 
Published on

ಬೆಂಗಳೂರು: ಇತ್ತೀಚೆಗೆ ಸೈಬರ್ ಕ್ರೈಂ ಹೆಚ್ಚುತ್ತಿರುವ ಸಂದರ್ಭದಲ್ಲಿ ರಕ್ಷಣಾ ಇಲಾಖೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೊತ್ತಿನಲ್ಲಿ ಕರ್ನಾಟಕದಲ್ಲಿ ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಸೈಬರ್ ಸೆಕ್ಯುರಿಟಿ ಬಗ್ಗೆ ಕಲಿಯಬೇಕೆಂದು ಸರ್ಕಾರ ನಿಯಮ ಜಾರಿಗೆ ತರುತ್ತಿದೆ. 

ಈ ಬಗ್ಗೆ ನ್ಯೂಇಂಡಿಯನ್ ಎಕ್ಸ್ ಪ್ರೆಸ್ ಕಚೇರಿಗೆ ಬಂದಿದ್ದ ಸಂದರ್ಭದಲ್ಲಿ ಪ್ರತಿನಿಧಿಗಳೊಂದಿಗೆ ಮಾತನಾಡಿದ ಐಟಿ-ಬಿಟಿ ಖಾತೆ ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ, ಎಲ್ಲಾ ಶಿಕ್ಷಣ ಸಂಸ್ಥೆಗಳು ವಿಶೇಷವಾಗಿ ನಾನ್ ಸ್ಟೆಮ್(ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ) ಸಂಸ್ಥೆಗಳಲ್ಲಿ ಸೈಬರ್ ಸೆಕ್ಯುರಿಟಿ ಬಗ್ಗೆ ಮೊದಲ ವರ್ಷದ ಕಾಲೇಜು ತರಗತಿಗೆ ಆರಂಭಿಸಲಾಗುವುದು. ವಿದ್ಯಾರ್ಥಿಗಳಿಗೆ ಅಂಕಿಅಂಶ ವಿಶ್ಲೇಷಣೆ ಮತ್ತು ಇಂಟರ್ನೆಟ್ ಬಗ್ಗೆ ಸಮಗ್ರವಾಗಿ ಹೇಳಿಕೊಡಲಾಗುತ್ತದೆ. 

ಎರಡನೇ ವರ್ಷದಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಬಗ್ಗೆ, ಮೂರನೇ ವರ್ಷದಲ್ಲಿ ಸೈಬರ್ ಸೆಕ್ಯುರಿಟಿ ಬಗ್ಗೆ ಪಾಠಗಳಿರುತ್ತವೆ. ಕೋರ್ಸ್ ಕಾಲೇಜು ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿದ್ದು ಆಯ್ಕೆಯ ವಿಷಯವಲ್ಲ. ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಪರೀಕ್ಷೆಯನ್ನೂ ಮಾಡಲಾಗುತ್ತದೆ ಎಂದರು.

ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಕಾಲೇಜುಗಳಲ್ಲಿನ ತರಬೇತುದಾರರು/ಶಿಕ್ಷಕರಿಗೆ NASSCOM ನಿಂದ ತರಬೇತಿ ನೀಡಲಾಗುತ್ತದೆ. ತರಬೇತುದಾರರು ಮತ್ತು ಪ್ರಶಿಕ್ಷಣಾರ್ಥಿಗಳ ತರಬೇತಿಯನ್ನು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಉಚಿತವಾಗಿ ನೀಡಲಾಗುವುದು ಎಂದು ಸಚಿವರು ಹೇಳಿದರು.

ರಾಜ್ಯದಲ್ಲಿ ಎಂಜಿನಿಯರಿಂಗ್ ಸೀಟುಗಳನ್ನು ತೆಗೆದುಕೊಳ್ಳುವವರ ಸಂಖ್ಯೆಯಲ್ಲಿ ಕುಸಿತ ಕಂಡುಬಂದಿದೆ ಎಂದು ಒಪ್ಪಿಕೊಂಡ ಸಚಿವರು, ಕರ್ನಾಟಕದ ಹೊರಗಿನ ವಿದ್ಯಾರ್ಥಿಗಳಿಗೆ ಪ್ರಯಾಣಿಸುವುದು ಕಷ್ಟಕರವಾಗಿದೆ, ಕಂಪ್ಯೂಟರ್ ಸೈನ್ಸ್, ಮಾಹಿತಿ ವಿಜ್ಞಾನ, ಕೃತಕ ಬುದ್ಧಿಮತ್ತೆ, ಡೇಟಾ ಅನಾಲಿಟಿಕ್ಸ್‌ಗೆ ಬೇಡಿಕೆ ಹೆಚ್ಚಿದೆ ಎಂದರು.

ಕ್ಯಾಂಪಸ್ ಗಳಲ್ಲಿ ಸ್ಟಾರ್ಟ್ ಅಪ್: ಎಲ್ಲಾ ವಿಶ್ವವಿದ್ಯಾಲಯಗಳು - ಸಾರ್ವಜನಿಕ, ಖಾಸಗಿ, ಡೀಮ್ಡ್, ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯಗಳು ಸಾಂಸ್ಥಿಕ ಸಹಯೋಗಕ್ಕಾಗಿ ವಿಶ್ವವಿದ್ಯಾನಿಲಯಗಳಲ್ಲಿ ಸ್ಟಾರ್ಟ್-ಅಪ್‌ಗಳನ್ನು ಸ್ಥಾಪಿಸಲು ಕೇಳಲಾಗಿದೆ. ಎಲ್ಲಾ ಕ್ಷೇತ್ರಗಳಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಅವಕಾಶವಿರುವುದರಿಂದ ಅವರು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸರ್ಕಾರ ಹೇಳುತ್ತದೆ ಎಂದು ಡಾ ಸಿ ಎನ್ ಅಶ್ವಥ ನಾರಾಯಣ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com