ಮುಸ್ಲಿಮರನ್ನು ಮನೆಗೆ ಕರೆಸಿ ಹಂದಿ ಮಾಂಸ ಮಾಡಿ ಬಡಿಸಿ ನೋಡೋಣ: ಹಂಸಲೇಖ ವಿರುದ್ಧ ಪ್ರತಾಪ್ ಸಿಂಹ ಕಿಡಿ
ಪೇಜಾವರ ಶ್ರೀಗಳ ಬಗ್ಗೆ ನಾದಬ್ರಹ್ಮ ಹಂಸಲೇಖ ವಿವಾದಾತ್ಮವಾಗಿ ಮಾತನಾಡಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹಂಸಲೇಖ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
Published: 16th November 2021 08:57 AM | Last Updated: 16th November 2021 01:25 PM | A+A A-

ಪ್ರತಾಪ್ ಸಿಂಹ
ಮೈಸೂರು: ಪೇಜಾವರ ಶ್ರೀಗಳ ಬಗ್ಗೆ ನಾದಬ್ರಹ್ಮ ಹಂಸಲೇಖ ವಿವಾದಾತ್ಮವಾಗಿ ಮಾತನಾಡಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹಂಸಲೇಖ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
ಉಡುಪಿಯ ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖರವರು ಪರಿಜ್ಞಾನದಿಂದ ಮಾತನಾಡಬೇಕಿತ್ತು. ಜನಾಭಿಪ್ರಾಯದ ವಿರುದ್ಧ ಮಾತನಾಡಿ ನಂತರ ಕ್ಷಮೆಯಾಚಿಸುವ ಚಾಳಿ ಹೆಚ್ಚಾಗಿದೆ," ಎಂದು ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಪೇಜಾವರ ಶ್ರೀಗಳು ಕೇವಲ ಒಂದು ಜಾತಿಯ ಸಂತರು ಅಲ್ಲ. ಅವರು ರಾಮ ಜನ್ಮಭೂಮಿಯ ಉಳಿವಿಗಾಗಿ ಹೋರಾಟ ಮಾಡಿದವರು. ದಲಿತ ಕೇರಿಗಳಿಗೆ ತೆರಳಿ ಒಗ್ಗಟ್ಟಿನ ಮನೋಭಾವದಲ್ಲಿ ಸಂಘಟನೆ ಮಾಡುತ್ತಿದ್ದವರು," ಎಂದರು.ಇದನ್ನೂ ಓದಿ:
ಕೊನೆಗೂ ಕ್ಷಮೆಯಾಚಿಸಿದ ಹಂಸಲೇಖ: ಪೇಜಾವರ ಶ್ರೀಗಳ ಬಗ್ಗೆ 'ನಾದಬ್ರಹ್ಮ' ಹೇಳಿದ್ದಾದರೂ ಏನು?
ಪೇಜಾವರ ಶ್ರೀಗಳು ಬೇರೆ ರೀತಿಯ ಜಾತಿ ಸ್ವಾಮೀಜಿ ರೀತಿ ಅಲ್ಲ. ಕರ್ಮಠ ವ್ಯವಸ್ಥೆಯನ್ನು ಮೀರಿ ಸಮಾನತೆ ಸಾರಿದವರು ಪೇಜಾವರ ಶ್ರೀಗಳು. ಸಾಧು-ಸಂತರ ಆಹಾರ ಪದ್ಧತಿ ಸಸ್ಯಾಹಾರ. ಮನಸ್ಸಿನ ತಾರತಮ್ಯ ತೆಗೆದು ಹಾಕಲು ಶ್ರೀಗಳು ಹೋಗಿದ್ದರೆ ಹೊರತು ಆಹಾರ ಪದ್ಧತಿಯ ಸಮಾನತೆಗೆ ಅಲ್ಲ.
ನಿಮ್ಮ ಮನೆಗೆ ಮುಸ್ಲಿಂ ಸ್ನೇಹಿತರನ್ನು ಕರೆಯಿರಿ. ಅವರಿಗೆ ಹಂದಿ ಮಾಂಸದ ಊಟ ಹಾಕಿ. ಅವರು ತಿನ್ನುತ್ತಾರಾ ನೋಡಿ? ಮುಸ್ಲಿಂ ಧರ್ಮದಲ್ಲಿ ಹಂದಿ ಮಾಂಸ ತಿನ್ನುವುದು ನಿಷೇಧ. ಅದಕ್ಕೆ ಅವರು ತಿನ್ನುವುದಿಲ್ಲ. ಆಗ ಅದನ್ನು ತಪ್ಪು ಎನ್ನುತ್ತೀರಾ? ಪ್ರಗತಿಪರ ಎನ್ನಿಸಿಕೊಳ್ಳುವ ಗೀಳಿಗೆ ಬಿದ್ದು, ಪ್ರಚಾರಕ್ಕಾಗಿ ಹೀಗೆ ಮಾತಾಡುತ್ತಿದ್ದಾರೆ," ಎಂದು ಆರೋಪಿಸಿದರು.