ನೈತಿಕ ಪೊಲೀಸ್ ಗಿರಿ: ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದ 6 ಮಂದಿ ಬಂಧನ

ನೈತಿಕ ಪೊಲೀಸ್‌ಗಿರಿ ಆರೋಪದ ಮೇಲೆ ಹಿಂದುತ್ವ ಸಂಘಟನೆಯ ಆರು ಮಂದಿಯನ್ನು ಮಂಗಳೂರು ನಗರದ ಹೊರವಲಯದ ಸುರತ್ಕಲ್‌ನಲ್ಲಿ ಬಂಧನಕ್ಕೊಳಪಡಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಂಗಳೂರು: ನೈತಿಕ ಪೊಲೀಸ್‌ಗಿರಿ ಆರೋಪದ ಮೇಲೆ ಹಿಂದುತ್ವ ಸಂಘಟನೆಯ ಆರು ಮಂದಿಯನ್ನು ಮಂಗಳೂರು ನಗರದ ಹೊರವಲಯದ ಸುರತ್ಕಲ್‌ನಲ್ಲಿ ಬಂಧನಕ್ಕೊಳಪಡಿಸಲಾಗಿದೆ.

ಬಂಧತರನ್ನು ಪ್ರಹ್ಲಾದ್ ಆಚಾರ್ಯ, ಪ್ರಶಾಂತ್ ಆಚಾರ್ಯ, ಗುರು ಪ್ರಸಾದ್, ಪ್ರತೀಶ್ ಆಚಾರ್ಯ, ಭರತ್ ಶೆಟ್ಟಿ ಮತ್ತು ಸುಖೇಶ್ ಎಂದು ಗುರ್ತಿಸಲಾಗಿದೆ.

ಸೋಮವಾರ ರಾತ್ರಿ 10.30ರ ಸುಮಾರಿಗೆ ಸುರತ್ಕಲ್ ನಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ವ್ಯಕ್ತಿ ಮೊಹಮ್ಮದ್ ಯಾಸೀನ್ ಮುಕ್ಕಾದ ಖಾಸಗಿ ಕಾಲೇಜಿನಲ್ಲಿ ಬಿಎಸ್'ಸಿ ವ್ಯಾಸಾಂಗ ಮಾಡುತ್ತಿದ್ದು, ಸಹಪಾಠಿಯಾಗಿದ್ದ ಆ್ಯನ್ಸಿ ವಿನ್ನಿ ದಯಾಸ್ ಅವರನ್ನು ಅಪಾರ್ಟ್ ವೊಂದಕ್ಕೆ ಡ್ರಾಪ್ ಮಾಡಲು ಹೋಗಿದ್ದರು. ಈ ವೇಳೆ ಇಬ್ಬರನ್ನು ಹಿಂಬಾಲಿಸಿದ್ದ ಆರೋಪಿಗಳು, ಇಬ್ಬರ ಮೇಲೆ ದಾಳಿ ನಡೆಸಿ ಕೆಟ್ಟ ಪದಗಳಿಂದ ನಿಂದಿಸಿ, ಹತ್ಯೆ ಮಾಡುವ ಬೆದರಿಕೆ ಹಾಕಿದ್ದರು.

ಈ ನಡುವೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಾದಾಪುರದಲ್ಲಿ ಎರಡು ‘ನೈತಿಕ ಪೊಲೀಸ್’ ಪ್ರಕರಣಗಳು ವರದಿಯಾಗಿದ್ದು, ಇಬ್ಬರು ಅಲ್ಪಸಂಖ್ಯಾತ ಸಮುದಾಯದ ಯುವಕರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದು ವರದಿಯಾಗಿದೆ. ಈ ಸಂಬಂಧ ಎಫ್‌ಐಆರ್ ದಾಖಲಾಗಿದ್ದರೂ ಪೊಲೀಸರು ತನಿಖೆ ನಡೆಸುತ್ತಿದ್ದು, ಈವರೆಗೂ ಯಾರನ್ನೂ ಬಂಧಿಸಿಲ್ಲ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com