ವರುಣನ ಆರ್ಭಟಕ್ಕೆ ರಾಜ್ಯ ತತ್ತರ: ನೀರಿನಲ್ಲಿ ಕೊಚ್ಚಿ ಹೋದ ಮಹಿಳೆ, ಹಲವೆಡೆ ಶಾಲಾ ಕಾಲೇಜುಗಳಿಗೆ 2 ದಿನ ರಜೆ ಘೋಷಣೆ

ವರುಣನ ಆರ್ಭಟಕ್ಕೆ ರಾಜ್ಯ ತತ್ತರಿಸಿದೆ. ವಿವಿಧೆಡೆ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ತೀವ್ರ ತೊಂದರೆ ಎದುರಿಸುವಂತಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ವರುಣನ ಆರ್ಭಟಕ್ಕೆ ರಾಜ್ಯ ತತ್ತರಿಸಿದೆ. ವಿವಿಧೆಡೆ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ತೀವ್ರ ತೊಂದರೆ ಎದುರಿಸುವಂತಾಗಿದೆ. ಬೆಂಗಳೂರು ನಗರದಲ್ಲಿ ಎಡೆಬಿಡದೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಜಿಟಿ ಜಿಟಿ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರ ಪಾಡು ಹೇಳತೀರದಂತಾಗಿದೆ.

ವರುಣ ಸೃಷ್ಟಿಸಿರುವ ಅವಾಂತರ ಒಂದೆರಡಲ್ಲ, ಕೋಲಾರ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಗೌನಿಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ಎ. ಕೊತ್ತೂರು ಗ್ರಾಮದ ಅಮರಾವತಮ್ಮ ಎಂಬ ಮಹಿಳೆ ತನ್ನ ಪತಿಯೊಂದಿಗೆ ಬೈಕ್ ನಲ್ಲಿ ಹೋಗುವಾಗ ಅಡ್ಡಗಲ್ ಬಳಿ ಬಜಪ್ಪಲಿ ಕಾಲುವೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಅವರ ಪತಿ ಬಾಬುರೆಡ್ಡಿ ಮರದ ರಕ್ಷಣೆ ಪಡೆದು ಹೇಗೋ ಪ್ರಾಣಪಾಯದಿಂದ ಪಾರಾಗಿದ್ದಾರೆ.

ನಿರಂತರ ಮಳೆಯಿಂದಾಗಿ ಬೆಂಗಳೂರು ನಗರದಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮಂಜುನಾಥ್ ಆದೇಶ ಹೊರಡಿಸಿದ್ದಾರೆ. ನಾಳೆ ಪರಿಸ್ಥಿತಿ ನೋಡಿಕೊಂಡು ಶನಿವಾರ ರಜೆ ನೀಡುವ ಬಗ್ಗೆ ನಿರ್ಧರಿಸಿದ್ದಾರೆ. ಇನ್ನೂ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ನಾಳೆ ಮತ್ತು ನಾಡಿದ್ದು, ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಮಳೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com