ದತ್ತಮಾಲಾಧಾರಿಗಳಿದ್ದ ಬಸ್ ಮೇಲೆ ಕಲ್ಲು ತೂರಾಟ ಖಂಡಿಸಿ ಕೋಲಾರ ಬಂದ್ ಯಶಸ್ವಿ, ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ
ದತ್ತ ಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ಖಂಡಿಸಿ ಗುರುವಾರ ವಿವಿಧ ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ಕೋಲಾರ ಬಂದ್ ಯಶಸ್ವಿಯಾಗಿದೆ.
Published: 18th November 2021 08:20 PM | Last Updated: 19th November 2021 02:23 PM | A+A A-

ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್
ಕೋಲಾರ: ದತ್ತ ಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ಖಂಡಿಸಿ ಗುರುವಾರ ವಿವಿಧ ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ಕೋಲಾರ ಬಂದ್ ಯಶಸ್ವಿಯಾಗಿದೆ.
ಕಳೆದ ಶನಿವಾರ ದತ್ತಮಾಲಾಧಾರಿಗಳು ಚಿಕ್ಕಮಗಳೂರಿನತ್ತ ಭಜನೆಯೊಂದಿಗೆ ಸಾಗುತ್ತಿದ್ದಾಗ ಕೆಲ ಕಿಡಿಗೇಡಿಗಳು ಕಲ್ಲು ತೂರಿದ್ದರು. ಇದನ್ನು ಖಂಡಿಸಿ ಭಜರಂಗದಳ, ಶ್ರೀರಾಮ ಸೇನೆ ಸೇರಿದಂತೆ ಹಿಂದೂ ಸಂಘಟನೆಗಳು ಕರೆ ನೀಡಿದ್ದ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎಲ್ಲಾ ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದವು. ಖಾಸಗಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸಂಪೂರ್ಣ ಸ್ತಬ್ಧವಾಗಿತ್ತು.
ಬಂದ್ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕ ಕಿಶೋರ್ ಬಾಬು ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಪ್ರತಿಭಟನಾಕಾರರು ನಗರದ ಪ್ರಮುಖ ವೃತ್ತಗಳಲ್ಲಿ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದರು.
ಈ ನಡುವೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗಮನದ ವಿಚಾರ ತಿಳಿದ ಕೋಲಾರ ಜಿಲ್ಲಾಧಿಕಾರಿ ಬುಧವಾರ ಅವರ ಪ್ರವೇಶಕ್ಕೆ ನಿಷೇಧ ಹೇರಿದ್ದರು. ಆದರೂ ಕೋಲಾರ ಪ್ರವೇಶಿಸಲು ಯತ್ನಿಸಿದ ಮುತಾಲಿಕ್ ಅವರನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಲಾಯಿತು.