ಯಾದಗಿರಿ: ಉಪಹಾರದಲ್ಲಿ ಹಾವಿನ ಮರಿ ಪತ್ತೆ; 52 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಅಬ್ಬೆ ತುಮಕೂರು ವಿಶ್ವಾರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯ ಉಪಹಾರದಲ್ಲಿ ಹಾವಿನ ಮರಿ ಪತ್ತೆಯಾಗಿರುವ ಘಟನೆ ನಡೆದಿದ್ದು, ಉಪ್ಪಿಟ್ಟು ಸೇವಿಸಿದ 52 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ...
ಉಪಹಾರದಲ್ಲಿ ಹಾವಿನ ಮರಿ ಪತ್ತೆ
ಉಪಹಾರದಲ್ಲಿ ಹಾವಿನ ಮರಿ ಪತ್ತೆ

ಯಾದಗಿರಿ: ಅಬ್ಬೆ ತುಮಕೂರು ವಿಶ್ವಾರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯ ಉಪಹಾರದಲ್ಲಿ ಹಾವಿನ ಮರಿ ಪತ್ತೆಯಾಗಿರುವ ಘಟನೆ ನಡೆದಿದ್ದು, ಉಪ್ಪಿಟ್ಟು ಸೇವಿಸಿದ 52 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇಂದು ಬೆಳಗ್ಗೆ ಉಪಹಾರ ಸೇವಿಸಿದ ನಂತರ ಮೂವರು ವಿದ್ಯಾರ್ಥಿಗಳು ವಾಂತಿ ಮಾಡಲು ಪ್ರಾರಂಭಿಸಿದರು ಮತ್ತು 49 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು ಎಂದು ಹೇಳಲಾಗುತ್ತಿದೆ.

ಉಪಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆಯಾದ ನಂತರ ವಿದ್ಯಾರ್ಥಿಗಳಿಗೆ ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿತು ಮತ್ತು ವಾಂತಿ ಮಾಡಲು ಆರಂಭಿಸಿದರು ಎನ್ನಲಾಗಿದೆ.

ಅಸ್ವಸ್ಥಗೊಂಡ ಮಕ್ಕಳಿಗೆ ಮುದ್ನಾಳ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಯಾದಗಿರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಮೂವರು ವಿದ್ಯಾರ್ಥಿಗಳು ತೀವ್ರ ನಿಗಾ ಘಟಕದಲ್ಲಿ ಮತ್ತು ಉಳಿದ 49 ವಿದ್ಯಾರ್ಥಿಗಳು ಸಾಮಾನ್ಯ ವಾರ್ಡ್‌ಗೆ ದಾಖಲಾಗಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ತಾಲೂಕು ಆರೋಗ್ಯಾಧಿಕಾರಿ ಹನುಮಂತರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com