ಅಮೆರಿಕದ ಸ್ಟಾರ್ಟಪ್ ಗಳಿಗೆ ಇಲ್ಲಿಂದಲೇ ಕೆಲಸ; ಸ್ಟಾರ್ಟಪ್ ಸಿಲಿಕಾನ್ ವ್ಯಾಲಿ ಬ್ರಿಡ್ಜ್ ರಚನೆ: ಡಾ. ಸಿ.ಎನ್. ಅಶ್ವತ್ಥ ನಾರಾಯಣ

 ಪ್ರತಿಭಾವಂತ ಉದ್ಯೋಗಿಗಳ ಕೊರತೆ ಎದುರಿಸುತ್ತಿರುವ ಅಮೆರಿಕದ ಸಿಲಿಕಾನ್ ವ್ಯಾಲಿ ಸ್ಟಾರ್ಟ್ ಅಪ್ ಗಳಿಗೆ ಇಲ್ಲಿಂದಲೇ ಉದ್ಯೋಗಿಗಳಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುವಂತೆ ಸ್ಟಾರ್ಟ್ ಅಪ್ ಸಿಲಿಕ್ಯಾನ್ ವ್ಯಾಲಿ ಬ್ರಿಡ್ಜ್ ರಚಿಸಲಾಗುವುದು ಎಂದು ಐಟಿ, ಬಿಟಿ ಸಚಿವ ಡಾ.ಸಿ. ಎನ್.ಅಶ್ವತ್ಥ cತಿಳಿಸಿದ್ದಾರೆ.
ಡಾ.ಸಿ.ಎನ್.ಅಶ್ವತ್ಥ ನಾರಾಯಣ
ಡಾ.ಸಿ.ಎನ್.ಅಶ್ವತ್ಥ ನಾರಾಯಣ

ಬೆಂಗಳೂರು: ಪ್ರತಿಭಾವಂತ ಉದ್ಯೋಗಿಗಳ ಕೊರತೆ ಎದುರಿಸುತ್ತಿರುವ ಅಮೆರಿಕದ ಸಿಲಿಕಾನ್ ವ್ಯಾಲಿ ಸ್ಟಾರ್ಟ್ ಅಪ್ ಗಳಿಗೆ ಇಲ್ಲಿಂದಲೇ ಉದ್ಯೋಗಿಗಳಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುವಂತೆ ಸ್ಟಾರ್ಟ್ ಅಪ್ ಸಿಲಿಕ್ಯಾನ್ ವ್ಯಾಲಿ ಬ್ರಿಡ್ಜ್ ರಚಿಸಲಾಗುವುದು ಎಂದು ಐಟಿ, ಬಿಟಿ ಸಚಿವ ಡಾ.ಸಿ. ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಮೂರು ದಿನಗಳ ಕಾಲ ಯಶಸ್ವಿಯಾಗಿ ನಡೆದು ಸಂಪನ್ನಗೊಂಡ 24ನೇ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ ಸಮಾರೋಪ ಕಾರ್ಯಕ್ರಮದಲ್ಲಿ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಐಟಿ-ಬಿಟಿ ಅಷ್ಟೇ ಅಲ್ಲದೇ ಇತರ ಉದ್ಯಮಗಳ ಸ್ಥಾಪನೆಗೆ ಉದ್ಯಮಿಗಳಿಂದ ಹೆಚ್ಚಿನ ಬೆಂಬಲ ವ್ಯಕ್ತವಾಗಿದೆ ಎಂದರು.
 
ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ರಾಜ್ಯವನ್ನು ಸ್ಟಾರ್ಟ್ ಅಪ್ ಸಿಲಿಕಾನ್ ವ್ಯಾಲಿ ಬ್ರಿಡ್ಜ್ ಬ್ರಿಡ್ಜ್ ಸ್ಥಾಪನೆ ಮೂಲಕ ಮತ್ತೊಂದು ಎತ್ತರಕ್ಕೆ ಕೊಂಡೊಯ್ಯಲಾಗುವುದು, ಅಮೆರಿಕದಲ್ಲಿರುವ ಸ್ಟಾರ್ಟ್ ಅಪ್ ಗಳಿಗೆ ಇಲ್ಲಿಂದಲೇ ಮಾನವ ಸಂಪನ್ಮೂಲ ಒದಗಿಸುವ ನಿಟ್ಟಿನಲ್ಲಿ ಸ್ಟಾರ್ಟ್ ಅಪ್ ಸಿಲಿಕಾನ್ ವ್ಯಾಲಿ ಕಾರ್ಯಪಡೆ ರಚಿಸಲಾಗುವುದು, ಇದರಿಂದ ರಾಜ್ಯದ ಯುವ ಜನತೆಗೆ ಉತ್ತಮ ಉದ್ಯೋಗಾವಕಾಶ ದೊರೆಯುವುದರ ಜೊತೆಗೆ ಆದಾಯ ವೃದ್ಧಿಯಾಗುತ್ತದೆ ಎಂದರು.

ಬೆಂಗಳೂರಿನಾಚೆಗೂ ಸ್ಟಾರ್ಟ್ಅಪ್ ಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಹುಬ್ಬಳ್ಳಿ, ಮೈಸೂರು, ಮಂಗಳೂರು ಕ್ಲಸ್ಟರ್ ಗಳಲ್ಲಿ ನವೋದ್ಯಮಗಳ ಸ್ಥಾಪನೆಗೆ ಒತ್ತು ಕೊಡಲಾಗಿದ್ದು, ಅದಕ್ಕೆ ಬೇಕಾಗಿರುವ ಅಗತ್ಯ ಪ್ರೋತ್ಸಾಹ ಧನ, ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com