ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 134 ಸೇರಿ ರಾಜ್ಯದಲ್ಲಿ 213 ಮಂದಿಗೆ ಪಾಸಿಟೀವ್; 5 ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 213 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,93,352 ಕ್ಕೆ ಏರಿಕೆಯಾಗಿದೆ.
ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ (ಸಂಗ್ರಹ ಚಿತ್ರ)
ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ (ಸಂಗ್ರಹ ಚಿತ್ರ)

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 213 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,93,352 ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಐವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,174 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 144 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,54,786ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 245  ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,48,053ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ 7096 ಸಕ್ರೀಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com