ಅಕಾಲಿಕ ಮಳೆ ಹಾನಿ ಬಗ್ಗೆ ಅಧಿಕಾರಿಗಳು ಕೊಟ್ಟಿರುವ ವರದಿ ಪರಿಶೀಲಿಸಿ ಪರಿಹಾರ ಬಿಡುಗಡೆ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಉಂಟಾಗಿರುವ ಹಾನಿಯ ಬಗ್ಗೆ ಅಧಿಕಾರಿಗಳು ಕೊಟ್ಟಿರುವ ವರದಿಯ ಮೇಲೆ ಪರಿಹಾರದ ಬಗ್ಗೆ ಚರ್ಚಿಸಿ, ಪರಿಹಾರ ಬಿಡುಗಡೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಉಂಟಾಗಿರುವ ಹಾನಿಯ ಬಗ್ಗೆ ಅಧಿಕಾರಿಗಳು ಕೊಟ್ಟಿರುವ ವರದಿಯ ಮೇಲೆ ಪರಿಹಾರದ ಬಗ್ಗೆ ಚರ್ಚಿಸಿ, ಪರಿಹಾರ ಬಿಡುಗಡೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ.

ಮಳೆಯಿಂದ ಬೆಳೆಗಳ ಹಾನಿ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಕಾಲಿಕ ಮಳೆಯಾಗುತ್ತಿದೆ. ದಕ್ಷಿಣ, ಉತ್ತರ ಒಳನಾಡು, ಕರಾವಳಿಗಳಲ್ಲಿ ವ್ಯಾಪಕ ಮಳೆ ಆಗಿದೆ. ಕಳೆದ ಮೂರು ದಿನಗಳಲ್ಲಿ ಬೆಳೆ ಹಾನಿ, ರಸ್ತೆ ಹಾನಿ ಹಾಗೂ ಕೆಲವು ಸಾವುಗಳಾಗಿವೆ. ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಬಾಕಿ ಪರಿಹಾರವನ್ನು ಬಿಡುಗಡೆ ಮಾಡಿದ್ದು, ಹಾನಿ ಕುರಿತು ಅಧಇಕಾರಿಗಳು ಕೊಟ್ಟಿರುವ ವರದಿ ಪರಿಶೀಲಿಸಿ ಪರಿಹಾರ ಬಿಡುಗಡೆ ಮಾಡಲಾಗುತ್ತದೆ. ಈ ಕುರಿತು ಇಂದು ಸಂಜೆ ಸಬೆ ನಡೆಸಿ ಚರ್ಚಿಸಲಾಗುತ್ತದೆ ಎಂದು ಹೇಳಿದ್ದಾರೆ.

ಜುಲೈ, ಆಗಸ್ಟ್ ಹಾಗೂ ಸೆಪ್ಟೆಂಬರ್​ನಲ್ಲಿ 3 ಲಕ್ಷ ರೈತರ ಕೃಷಿ ಬೆಳೆ ಹಾನಿಯಾಗಿತ್ತು. ರೂ.130 ಕೋಟಿ ಬೆಳೆ ಪರಿಹಾರ ಬಾಕಿ ಇತ್ತು. ಮೊನ್ನೆ ಅದನ್ನು ಕೊಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಪ್ರಸ್ತುತ ರಾಜ್ಯದಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಉಂಟಾಗಿರುವ ಹಾನಿಯ ಬಗ್ಗೆ ಅಧಿಕಾರಿಗಳು ಕೊಟ್ಟಿರುವ ವರದಿ ಮೇಲೆ ಇವತ್ತು ಸಂಜೆ ಪರಿಹಾರದ ಕುರಿತು ಚರ್ಚೆ ಮಾಡುತ್ತೇವೆ ತಿಳಿಸಿದ್ದಾರೆ.

ಜುಲೈ, ಆಗಸ್ಟ್ ಹಾಗೂ ಸೆಪ್ಟೆಂಬರ್​ನಲ್ಲಿ 3 ಲಕ್ಷ ರೈತರ ಕೃಷಿ ಬೆಳೆ ಹಾನಿಯಾಗಿತ್ತು. 130 ಕೋಟಿ ರೂ. ಬೆಳೆ ಪರಿಹಾರ ಬಾಕಿ ಇತ್ತು. ಮೊನ್ನೆ ಅದನ್ನು ಕೊಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಪ್ರಸ್ತುತ ರಾಜ್ಯದಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಉಂಟಾಗಿರುವ ಹಾನಿಯ ಬಗ್ಗೆ ಅಧಿಕಾರಿಗಳು ಕೊಟ್ಟಿರುವ ವರದಿ ಮೇಲೆ ಇವತ್ತು ಸಂಜೆ ಪರಿಹಾರದ ಕುರಿತು ಚರ್ಚೆ ಮಾಡುತ್ತೇವೆ ಎಂದರು.

ಕೆಲ ಸಚಿವರು ಜಿಲ್ಲೆಗಳಲ್ಲಿದ್ದಾರೆ. ಜಿಲ್ಲೆಗಳಿಗೆ ಹೋಗಲು ಚುನಾವಣಾ ಆಯೋಗದ ಅನುಮತಿ ಬೇಕು. ನಿನ್ನೆ ಕಾರ್ಯದರ್ಶಿ ಮೂಲಕ ಆಯೋಗಕ್ಕೆ ಅನುಮತಿ ಕೇಳಿದ್ದೇವೆ. ಆಯೋಗ ಅನುಮತಿ ಕೊಟ್ಟರೆ ಎಲ್ಲಾ ಸಚಿವರೂ ಜಿಲ್ಲೆಗಳಿಗೆ ಹೋಗಿ ಮಳೆಯಿಂದಾದ ಹಾನಿಯ ಬಗ್ಗೆ ಪರಿಶೀಲನೆ ನಡೆಸುತ್ತಾರೆಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com