ಎಪಿಎಂಸಿ ಕಾಯ್ದೆ, ಭೂಸುಧಾರಣೆ ಕಾಯ್ದೆ ತಿದ್ದುಪಡಿ ರದ್ದತಿಗೆ ರೈತರ ಹೋರಾಟ: ಕಾಂಗ್ರೆಸ್ ಬೆಂಬಲ
ಎಪಿಎಂಸಿ ಕಾಯ್ದೆ ಮತ್ತು ರಾಜ್ಯ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರದ್ದತಿಗೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಹೋರಾಟವನ್ನು ತೀವ್ರಗೊಳಿಸಲು, ರೈತರು, ದಲಿತ ಮತ್ತು ಕಾರ್ಮಿಕ ಸಂಘಟನೆಗಳನ್ನೊಳಗೊಂಡ ಸಂಯುಕ್ತ ಹೋರಾಟ ಕರ್ನಾಟಕ ನಿರ್ಧರಿಸಿದೆ.
Published: 21st November 2021 08:14 AM | Last Updated: 21st November 2021 08:17 AM | A+A A-

ಪ್ರತಿಭಟನೆ ನಿರತ ರೈತರ ಸಾಂದರ್ಭಿಕ ಚಿತ್ರ
ಬೆಂಗಳೂರು: ಎಪಿಎಂಸಿ ಕಾಯ್ದೆ ಮತ್ತು ರಾಜ್ಯ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರದ್ದತಿಗೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಹೋರಾಟವನ್ನು ತೀವ್ರಗೊಳಿಸಲು, ರೈತರು, ದಲಿತ ಮತ್ತು ಕಾರ್ಮಿಕ ಸಂಘಟನೆಗಳನ್ನೊಳಗೊಂಡ ಸಂಯುಕ್ತ ಹೋರಾಟ ಕರ್ನಾಟಕ ನಿರ್ಧರಿಸಿದೆ.
ನವೆಂಬರ್ 26 ರಂದು ಸಂಯುಕ್ತ ಹೋರಾಟ ಕರ್ನಾಟಕ ಕಾರ್ಯಕರ್ತರು ರಾಜ್ಯದ ವಿವಿಧೆಡೆ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಿದ್ದಾರೆ. ರೈತರ ಹೋರಾಟಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸುವುದಾಗಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಆದಾಗ್ಯೂ. ನವೆಂಬರ್ 26ರೊಳಗೆ ಒಂದು ವೇಳೆ ಸರ್ಕಾರ ತಿದ್ದುಪಡಿಗಳನ್ನು ರದ್ದುಪಡಿಸಿದ್ದಲ್ಲಿ ಪ್ರತಿಭಟನೆ ನಡೆಸಲು ನಿರ್ಧಾರವನ್ನು ಪುನರ್ ಪರಿಗಣಿಸಲಾಗುವುದು ಎಂದು ಹೇಳಿದೆ.
ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದುಪಡಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸದ ಬೆನ್ನಲ್ಲೇ, ಬೆಂಗಳೂರಿನಲ್ಲಿ ಶನಿವಾರ ಸಭೆ ನಡೆಸಿದ ಸಂಯುಕ್ತ ಹೋರಾಟ ಕರ್ನಾಟಕ ಸದಸ್ಯರು, ಎಪಿಎಂಸಿ ಕಾಯ್ದೆ ಹಾಗೂ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗಳನ್ನು ಸರ್ಕಾರ ಕೂಡಲೇ ರದ್ದುಪಡಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದರು.
ಈ ಮಧ್ಯೆ ಎಪಿಎಂಸಿ ಹಾಗೂ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ತಿದ್ದುಪಡಿಯನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ತಿದ್ದುಪಡಿ ನಂತರ, ಎಪಿಎಂಸಿ ಹೊರಗಿನ ವ್ಯಾಪಾರಿಗಳ ಮೇಲೆ ರಾಜ್ಯ ಸರ್ಕಾರಕ್ಕೆ ಯಾವುದೇ ನಿಯಂತ್ರಣವಿರಲ್ಲ ಮತ್ತು ಅವರ ಮೇಲೆ ನಿಗಾ ಇಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.