ಕೋವಿಡ್-19: ರಾಜ್ಯದಲ್ಲಿ ಇಂದು 247 ಹೊಸ ಸೋಂಕು ಪ್ರಕರಣಗಳು ಪತ್ತೆ, ಒಂದು ಸಾವು!

ರಾಜ್ಯದಲ್ಲಿ ಮಾರಕ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 247 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಮಾರಕ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 247 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 247 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಈ ವರೆಗೂ ಪತ್ತೆಯಾದ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 2993599ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು ಕೋರೋನಾದಿಂದಾಗಿ ಓರ್ವ ಸೋಂಕಿತ ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್ ಗೆ ಬಲಿಯಾದವರ ಸಂಖ್ಯೆ 38175ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 278 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಗುಣಮುಖರ ಸಂಖ್ಯೆ 2948331ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 7064ಕ್ಕೆ ಕುಸಿದಿದೆ. 

ರಾಜಧಾನಿ ಬೆಂಗಳೂರಿನಲ್ಲಿ ಇಂದು 134 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಂದು ಸಾವು ವರದಿಯಾಗಿದೆ. ಆ ಮೂಲಕ ಬೆಂಗಳೂರಿನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1255054ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 16323ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 180 ಮಂದಿ ಸೋಂಕಿತರು ಗುಣಮುಖರಾಗಿದ್ದು, ನಗರದಲ್ಲಿ ಒಟ್ಟಾರೆ ಗುಣಮುಖರ ಪ್ರಮಾಣ 1232932ಕ್ಕೆ ಏರಿಕೆಯಾಗಿದೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com