ವ್ಯಾಪಕ ಮಳೆಯಿಂದ ಸಂಪೂರ್ಣವಾಗಿ ಮಳೆ ಹಾನಿಯಾದವರಿಗೆ 1 ಲಕ್ಷ ರೂಪಾಯಿ ಪರಿಹಾರ ಬಿಡುಗಡೆ: ಸಿಎಂ ಬೊಮ್ಮಾಯಿ

ರಾಜ್ಯಾದ್ಯಂತ ಅಕಾಲಿಕ ಮಳೆಯಿಂದ ಸಾಕಷ್ಟು ಬೆಳೆಹಾನಿ, ಆಸ್ತಿಪಾಸ್ತಿ ನಷ್ಟ, ಜನ-ಜಾನುವಾರುಗಳು ಪ್ರಾಣ ಕಳೆದುಕೊಂಡಿದ್ದಾರೆ. 685 ಕೋಟಿ ರೂಪಾಯಿ ಪರಿಹಾರ ನೀಡುವ ಬಗ್ಗೆ ನಾನು ತಕ್ಷಣದ ವರದಿಯನ್ನು ಅಧಿಕಾರಿಗಳ ಬಳಿ ಕೇಳಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯಾದ್ಯಂತ ಅಕಾಲಿಕ ಮಳೆಯಿಂದ ಸಾಕಷ್ಟು ಬೆಳೆಹಾನಿ, ಆಸ್ತಿಪಾಸ್ತಿ ನಷ್ಟ, ಜನ-ಜಾನುವಾರುಗಳು ಪ್ರಾಣ ಕಳೆದುಕೊಂಡಿದ್ದಾರೆ. 685 ಕೋಟಿ ರೂಪಾಯಿ ಪರಿಹಾರ ನೀಡುವ ಬಗ್ಗೆ ನಾನು ತಕ್ಷಣದ ವರದಿಯನ್ನು ಅಧಿಕಾರಿಗಳ ಬಳಿ ಕೇಳಿದ್ದೇನೆ. ಈ ಹಿಂದಿನ ಬೆಳೆಹಾನಿ ನಷ್ಟಕ್ಕೆ 130 ಕೋಟಿ ರೂಪಾಯಿ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ತಮ್ಮ ನಿವಾಸದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಯಿಂದ ಮನೆ ಸಂಪೂರ್ಣವಾಗಿ ಕುಸಿದು ಹೋದವರಿಗೆ 1 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುತ್ತಿದೆ. ಭಾಗಶಃ ಮನೆ ಹಾನಿಗೀಡಾದವರಿಗೆ ಸಹ ಪರಿಹಾರ ನೀಡಲು ಸೂಚಿಸಲಾಗಿದೆ ಬೆಂಗಳೂರು ನಗರದಾದ್ಯಂತ ಹೊಂಡ ಗುಂಡಿ ಬಿದ್ದಿರುವ ರಸ್ತೆಗಳ ರಿಪೇರಿಗೆ ಮತ್ತು ಸೇತುವೆಗಳ ನಿರ್ಮಾಣಕ್ಕೆ 500 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸಹ ತಿಳಿಸಿದರು.

ಮಳೆ ಹಾನಿಗೆ ಆಯಾ ಇಲಾಖೆಯ ಮಂತ್ರಿಗಳು ಸ್ಥಳಕ್ಕೆ ಹೋಗಿ ಆಗಿರುವ ಹಾನಿಯ ಬಗ್ಗೆ ತಿಳಿದುಕೊಳ್ಳಲು ಮತ್ತು ಮುಖ್ಯಮಂತ್ರಿಗಳು ಪ್ರವಾಸ ಮಾಡಲಿದ್ದಾರೆ. ಯುದ್ಧೋಪಾದಿಯಲ್ಲಿ ಬೆಳೆ ಸಮೀಕ್ಷೆ ಮಾಡಿ ಪರಿಹಾರವನ್ನು ವಿತರಿಸಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com