ಹಾಲಕೆರೆಯ ಅನ್ನದಾನೇಶ್ವರ ಮಠದ ಅನ್ನದಾನೇಶ್ವರ ಡಾ. ಸಂಗನ ಬಸವ ಸ್ವಾಮೀಜಿ, ಕೊಟ್ಟೂರು ಮಠದ ಜಗದ್ಗುರು ಡಾ. ಸಂಗನ ಬಸವ ಮಹಾಸ್ವಾಮಿ ಲಿಂಗೈಕ್ಯ

ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಹಾಲಕೆರೆಯ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಅಭಿನವ ಅನ್ನದಾನೇಶ್ವರ ಡಾ. ಸಂಗನಬಸವ ಮಹಾಸ್ವಾಮಿಗಳು ಹೃದಯ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಲಿಂಗೈಕ್ಯರಾಗಿದ್ದಾರೆ. 
ಲಿಂಗೈಕ್ಯರಾದ ಸ್ವಾಮೀಜಿಗಳು
ಲಿಂಗೈಕ್ಯರಾದ ಸ್ವಾಮೀಜಿಗಳು

ಬಳ್ಳಾರಿ: ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಹಾಲಕೆರೆಯ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಅಭಿನವ ಅನ್ನದಾನೇಶ್ವರ ಡಾ. ಸಂಗನಬಸವ ಮಹಾಸ್ವಾಮಿಗಳು ಹೃದಯ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಲಿಂಗೈಕ್ಯರಾಗಿದ್ದಾರೆ. 

ಹಾಲಕೆರೆ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠ ಹೊಸಪೇಟೆ, ಬಳ್ಳಾರಿಯ ಕೊಟ್ಟೂರು ಸ್ವಾಮಿಮಠ, ಶ್ರೀಮದ ಶಿವಯೋಗಿ ಮಂದಿರದ ಅಧ್ಯಕ್ಷರಾಗಿದ್ದರು. ಇಂದು ಸಂಜೆ ಅಥವಾ ನಾಳೆ ಹಾಲಕೆರೆ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಈ ಮಠ 28 ಶಾಖಾ ಮಠಗಳನ್ನು ಹೊಂದಿದೆ. ಕಳೆದ 10ರಂದು ಹಾಲಕೇರಿಯ 13ನೇ ಪೀಠಾಧಿಪತಿಯಾಗಿ ನೂತನ ಮುಪ್ಪಿನ ಬಸವಲಿಂಗ ಸ್ವಾಮೀಜಿ ಅಧಿಕಾರ ವಹಿಸಿಕೊಂಡಿದ್ದರು.

ಸಿಎಂ ಸಂತಾಪ
ಹಾಲಕೆರೆಯ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಅಭಿನವ ಅನ್ನದಾನೇಶ್ವರ ಡಾ. ಸಂಗನ ಬಸವ ಮಹಾಸ್ವಾಮಿಗಳ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳಿಗೆ 85 ವರ್ಷ ವಯಸ್ಸಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಲಿಂಗೈಕ್ಯರಾಗಿದ್ದಾರೆ. ಹಲವು ದಶಕಗಳ ಕಾಲ ಅವರು ಕನ್ನಡ ನಾಡು, ನುಡಿ, ಲಿಂಗಾಯತ ಧರ್ಮಕ್ಕೆ ಸಲ್ಲಿಸಿದ ಸೇವೆ ಅಪಾರ. ಅವರ ನಿಧನದಿಂದ ಅಪಾರ ಭಕ್ತ ಸಮೂಹ ಅನಾಥವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಅವರ ಭಕ್ತ ಸಮೂಹಕ್ಕೆ ನೀಡಲಿ ಎಂದು ಕೋರುತ್ತೇನೆ ಎಂದಿದ್ದಾರೆ.

ಡಾ ಸಂಗನ ಬಸವ ಮಹಾಸ್ವಾಮಿ ಲಿಂಗೈಕ್ಯ: ಇನ್ನು ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಕೊಟ್ಟೂರು ಮಠ ಸಂಸ್ಥಾನದ ಜಗದ್ಗುರು ಡಾ.ಸಂಗನ ಬಸವ ಮಹಾಸ್ವಾಮಿ(87) ಸಹ ಲಿಂಗೈಕ್ಯರಾಗಿದ್ದಾರೆ. ಉತ್ತರ ಕರ್ನಾಟಕದ ಹಿರಿಯ ವೀರಶೈವ ಲಿಂಗಾಯತ ಜಗದ್ಗುರುಗಳಾಗಿದ್ದ ಡಾ.ಸಂಗನ ಬಸವ ಮಹಾಸ್ವಾಮಿ ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನ‌ ಅಪೋಲೊ ಅಸ್ಪತ್ರೆಯಲ್ಲಿ ದಾಖಲಾಗಿದ್ರು. ಆದ್ರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ 5.30 ಕ್ಕೆ ಲಿಂಗೈಕ್ಯರಾಗಿದ್ದಾರೆ.

ಶಿಕ್ಷಣ ಸಂಸ್ಥೆಗಳ ಮೂಲಕ ತ್ರಿವಿಧ ದಾಸೋಹಿಯಾಗಿದ್ದ ಡಾ.ಸಂಗನ ಬಸವ ಮಹಾಸ್ವಾಮಿ 2004ರಿಂದ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಶಿವಯೋಗಮಂದಿರದ ಅಧ್ಯಕ್ಷರಾಗಿದ್ದರು. ಬಸವಾದಿ ಶರಣರ ವಚನಗಳನ್ನ ನಾಡಿನಾದ್ಯಂತ ಪಸರಿಸುವ ಕಾಯಕದಲ್ಲಿ ನಿರತರಾಗಿದ್ದರು. ಹೊಸಪೇಟೆ ,ಬಳ್ಳಾರಿ, ಗದಗ ಬಾಗಲಕೋಟೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನ ಕಟ್ಟಿ ಬಡವರಿಗೆ ಅನ್ನ ಅಕ್ಷರ ದಾಸೋಹ ನೀಡುತ್ತಿದ್ದರು. 

ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಸಂತಾಪ ಸೂಚಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com