ಉಗ್ರ ಸಂಘಟನೆ ಪತ್ರಿಕೆಯಲ್ಲಿ ಮುರುಡೇಶ್ವರನ ಭಗ್ನಗೊಂಡ ಪ್ರತಿಮೆ..! ಕರ್ನಾಟಕದ ಪ್ರಸಿದ್ಧ ಯಾತ್ರಾತಾಣದ ಮೇಲೆ ಐಸಿಸ್ ದಾಳಿಗೆ ಸಂಚು?

ಕರ್ನಾಟಕದ ಪ್ರಸಿದ್ಧ ಯಾತ್ರಾತಾಣಗಳಲ್ಲಿ ಒಂದಾದ ಉತ್ತರ ಕನ್ನಡದ ಮುರುಡೇಶ್ವರ(murudeshwar) ದ ಬೃಹತ್ ಈಶ್ವರ ಪ್ರತಿಮೆ ಚಿತ್ರ ಜಗತ್ತಿನ ಕುಖ್ಯಾತ ಉಗ್ರ ಸಂಘಟನೆಯ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಇದು ಉಗ್ರ ಸಂಘಟನೆಯ ದಾಳಿಗೆ ಸಂಚೇ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೈರಲ್ ಫೋಟೋ
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೈರಲ್ ಫೋಟೋ
Updated on

ಕಾರವಾರ: ಕರ್ನಾಟಕದ ಪ್ರಸಿದ್ಧ ಯಾತ್ರಾತಾಣಗಳಲ್ಲಿ ಒಂದಾದ ಉತ್ತರ ಕನ್ನಡದ ಮುರುಡೇಶ್ವರ(murudeshwar) ದ ಬೃಹತ್ ಈಶ್ವರ ಪ್ರತಿಮೆ ಚಿತ್ರ ಜಗತ್ತಿನ ಕುಖ್ಯಾತ ಉಗ್ರ ಸಂಘಟನೆಯ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಇದು ಉಗ್ರ ಸಂಘಟನೆಯ ದಾಳಿ ಸಂಚೇ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ.

ಹೌದು.. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರ ಶಿವನ ವಿಗ್ರಹ (murudeshwar temple Shiva statue)ದ ಶಿರವನ್ನು ಕತ್ತರಿಸಿದಂತೆ ಎಡಿಟ್ ಮಾಡಲಾದ ಫೋಟೊವನ್ನು ಉಗ್ರ ಸಂಘಟನೆ ‘ಐಸಿಸ್’(ISIS)ನ ಪತ್ರಿಕೆಯಲ್ಲಿ ಪ್ರಕಟಿಸಲಾಗಿದ್ದು, ಈ ಚಿತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. 

ಅಂಶುಲ್ ಸಕ್ಸೇನಾ ಎಂಬುವವರು ಇದನ್ನು ತಮ್ಮ ಖಾತೆಗಳಲ್ಲಿ ಪೋಸ್ಟ್ ಮಾಡಿ ಸರ್ಕಾರಗಳ ಗಮನ ಸೆಳೆಯಲು ಯತ್ನಿಸಿದ್ದಾರೆ. ‘ಐಸಿಸ್’ ಮುಖವಾಣಿ ಪತ್ರಿಕೆ ‘ದಿ ವಾಯ್ಸ್ ಆಫ್ ಹಿಂದ್’ (the Voice of hind)ನಲ್ಲಿ ಮುರುಡೇಶ್ವರದ ಶಿವನ ವಿಗ್ರಹವನ್ನು ಪ್ರಕಟಿಸಲಾಗಿದೆ. ಅದರ ಮೇಲೆ ‘ಇದು ನಕಲಿ ದೇವರನ್ನು ಒಡೆಯುವ ಸಮಯ’ (Its time to Break False Gods) ಎಂಬ ವಾಕ್ಯವನ್ನು ಬರೆಯಲಾಗಿದೆ. ಅಲ್ಲದೆ ಶಿವನ ಪ್ರತಿಮೆಯನ್ನು ಅರ್ಧಕ್ಕೆ ಕತ್ತರಿಸಿ, ತಲೆಯ ಭಾಗದಲ್ಲಿ ಉಗ್ರ ಸಂಘಟನೆಯ ಮಾದರಿಯ ಧ್ವಜ ಹಾರಾಡುತ್ತಿರುವಂತೆ ಚಿತ್ರಿಸಲಾಗಿದೆ.

ಇನ್ನು ಪೋಸ್ಟ್ ನ ಅಧಿಕೃತತೆ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲವಾದರೂ, ಈ ಕುರಿತು ಕೂಡಲೇ ಸುರಕ್ಷಾ ಕ್ರಮ ಕೈಗೊಳ್ಳಬೇಕು ಎಂದು ಅಂಶುಲ್ ಸಕ್ಸೇನಾ ತಮ್ಮ ಪೋಸ್ಟ್‌ನಲ್ಲಿ ಸರ್ಕಾರಗಳನ್ನು ಆಗ್ರಹಿಸಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ತಕ್ಷಣದ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ಈ ಪೋಟೋ ಮತ್ತು ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದರ ಸತ್ಯಾಸತ್ಯತೆ ಸಂಬಂಧಿಸಿದ ಇಲಾಖೆ ಕ್ರಮವಹಿಸಬೇಕು ಮತ್ತು ಇಂತಹ ದುಷ್ಕೃತ್ಯಕ್ಕೆ ಸರ್ಕಾರ ಅವಕಾಶ ನೀಡಬಾರದು ಎಂಬುದು ಸಾರ್ವಜನಿಕರ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com