ರಾಜ್ಯದಲ್ಲಿ ಮತ್ತೆ ಕೋವಿಡ್ ಸೋಂಕು ಹೆಚ್ಚಳ: ಹುಬ್ಬಳ್ಳಿ ಎಸ್ ಡಿಎಂ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್!

ಧಾರವಾಡ ಬಳಿಯಿರುವ ಎಸ್‌ಡಿಎಂ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಬುಧವಾರ ಕೋವಿಡ್ ಪಾಸಿಟಿವ್ ಸೋಂಕು ದೃಢಪಟ್ಟಿದೆ.
ಎಸ್ ಡಿ ಎಂ ಕಾಲೇಜು ಸೀಲ್ ಡೌನ್
ಎಸ್ ಡಿ ಎಂ ಕಾಲೇಜು ಸೀಲ್ ಡೌನ್

ಧಾರವಾಡ: ಧಾರವಾಡ ಬಳಿಯಿರುವ ಎಸ್‌ಡಿಎಂ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಬುಧವಾರ ಕೋವಿಡ್ ಪಾಸಿಟಿವ್ ಸೋಂಕು ದೃಢಪಟ್ಟಿದೆ.

ಕೋವಿಡ್ ಪಾಸಿಟಿವ್ ದೃಢಪಟ್ಟವರೆಲ್ಲರೂ ಮೆಡಿಕಲ್ ವಿದ್ಯಾರ್ಥಿಗಳಾಗಿದ್ದಾರೆ. ಇವರೆಲ್ಲರಿಗೂ ಕೋವಿಡ್ ಲಕ್ಷಣಗಳಿಲ್ಲ. ಆದರೆ ಸ್ವಲ್ಪ ಮೈಕೈ ನೋವು ಕಾಣಿಸಿಕೊಂಡಿದೆ. ಈ ವೇಳೆ ವಿದ್ಯಾರ್ಥಿಗಳೆಲ್ಲರನ್ನೂ ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

ಸೋಂಕಿತ ಎಲ್ಲ ವಿದ್ಯಾರ್ಥಿಗಳನ್ನು ಕಾಲೇಜಿನ ಹಾಸ್ಟೆಲ್‌ನಲ್ಲಿ ಆರೈಕೆ ಮಾಡಲಾಗುತ್ತಿದೆ. ಇವರಿಗೆ ಕೋವಿಡ್ ಯಾರ ಸಂಪರ್ಕದಿಂದ ಬಂದಿದೆ ಎಂಬುದು ಇನ್ನೂ ತಿಳಿದು ಬಂದಿಲ್ಲ. ಸದ್ಯ ಕೊರೊನಾ ಸೋಂಕಿತರ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆಯಿದೆ.

ಆರಂಭದಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ಹಾಸ್ಟೆಲ್‌ನ 270 ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು. ತಪಾಸಣೆ ವೇಳೆ 66 ವಿದ್ಯಾರ್ಥಿಗಳಿಗೆ ಸೋಂಕು ಇರುವುದು ದೃಢಪಟ್ಟಿದೆ. ಇನ್ನೂ 200 ವಿದ್ಯಾರ್ಥಿಗಳಿಗೆ ತಪಾಸಣೆ ನಡೆಸಲು ನಿರ್ಧಾರ ಮಾಡಲಾಗಿದ್ದು, ಸದ್ಯ ಹಾಸ್ಟೆಲ್‌ನಲ್ಲಿ ಸೋಂಕಿತ ವಿದ್ಯಾರ್ಥಿಗಳಿಗೆ ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ತಿಳಿಸಿದ್ದಾರೆ.

ಕಾಲೇಜಿನಲ್ಲಿ ಇತ್ತೀಚೆಗೆ ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗಾಗಿ ಪ್ರೆಶರ್ಸ್ ಪಾರ್ಟಿ ಆಯೋಜಿಸಲಾಗಿತ್ತು,  ಪಾರ್ಟಿಯಲ್ಲಿ ಪಾಲ್ಗೊಂಡವರಲ್ಲಿ ಯಾರಿಗೋ ಸೋಂಕು ಇದ್ದು, ಆ ಸೋಂಕು ಎಲ್ಲರಿಗೂ ಹರಡಿರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಸೋಂಕು ನಿವಾರಣೆ, ನೈರ್ಮಲ್ಯ, ಸೋಂಕಿತ ರೋಗಿಗಳು ಮತ್ತು ಕ್ವಾರಂಟೈನ್‌ನಲ್ಲಿರುವ ವಿದ್ಯಾರ್ಥಿಗಳಿಗೆ ಆಹಾರ ಒದಗಿಸುವುದು ಮತ್ತು ಇತರ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪಾಟೀಲ್ ಹೇಳಿದರು.

ಸೋಂಕು ಹರಡುವುದನ್ನು ತಡೆಗಟ್ಟಲು ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಲು ನಾನು ಸಹ ಕಾಲೇಜಿಗೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ,  ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com