ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಭೂ ಸುಧಾರಣೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದತಿಗೆ ಆಗ್ರಹ: ಹೆದ್ದಾರಿ ತಡೆದು ನಾಳೆ ರೈತರ ಪ್ರತಿಭಟನೆ

ಎಪಿಎಂಸಿ ಕಾಯ್ದೆ ಮತ್ತು ಕರ್ನಾಟಕ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ರದ್ದು ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ರೈತ ಸಂಘಟನೆಗಳ ಸದಸ್ಯರು ಶುಕ್ರವಾರ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಬೆಂಗಳೂರು: ಎಪಿಎಂಸಿ ಕಾಯ್ದೆ ಮತ್ತು ಕರ್ನಾಟಕ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ರದ್ದು ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ರೈತ ಸಂಘಟನೆಗಳ ಸದಸ್ಯರು ಶುಕ್ರವಾರ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಕರ್ನಾಟಕ ರಾಜ್ಯ ಕಬ್ಬು ರೈತರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸುವುದಲ್ಲದೆ, ರಸ್ತೆಗಳಲ್ಲಿಯೇ ಅಡುಗೆಯನ್ನೂ ಮಾಡಲಿದ್ದಾರೆಂಜು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದು, ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನು ಕುರಿತ ನಮ್ಮ ಬೇಡಿಕೆ ಬಗ್ಗೆಯೂ ನಿಲುವು ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರ ಕೂಡಲೇ ಎಪಿಎಂಸಿ ಮತ್ತು ಭೂಸುಧಾರಣಾ ಕಾಯ್ದೆಗಳನ್ನು ರದ್ದುಪಡಿಸಬೇಕು ಮತ್ತು ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ) ಪರಿಷ್ಕರಿಸಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.

ಎಪಿಎಂಸಿ ಕಾಯ್ದೆ ತಿದ್ದುಪಡಿ ರದ್ದುಗೊಳಿಸುವ ಕುರಿತು ಕೇಂದ್ರ ಸರ್ಕಾರ ಮತ್ತಷ್ಟು ಸ್ಪಷ್ಟ ಮಾಹಿತಿಗಳನ್ನು ನೀಡಿದ ಬಳಿಕ ಈ ಕುರಿತು ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಕಾಯಿದೆ ಜಾರಿಗೆ ಅನುಕೂಲವಾಗುವಂತೆ ರಾಜ್ಯ ಸರಕಾರ ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತಂದಿದ್ದು, ಈಗ ಅದನ್ನು ರದ್ದುಗೊಳಿಸಲಾಗುತ್ತಿದೆ.

Related Stories

No stories found.

Advertisement

X
Kannada Prabha
www.kannadaprabha.com