ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ ಎಸ್ ರುದ್ರೇಶಪ್ಪ ಜಾಮೀನು ಭವಿಷ್ಯ ಇಂದು ನಿರ್ಧಾರ, ಶಾಂತಗೌಡ ಬಿರಾದಾರ್ ಗೆ ಸದ್ಯ ಜೈಲೇ ಗತಿ

ಎಸಿಬಿ ಅಧಿಕಾರಿಗಳ ದಾಳಿ ವೇಳೆ ಅಪಾರ ಪ್ರಮಾಣದ ಅಕ್ರಮ ಆಸ್ತಿ, ಸಂಪತ್ತು ಪತ್ತೆಯಾದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಗದಗದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ ಎಸ್ ರುದ್ರೇಶಪ್ಪ ಅವರ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ.
ಶಾಂತಗೌಡ ಬಿರಾದಾರ್ ಮನೆಯಲ್ಲಿ ಎಸಿಬಿ ಅಧಿಕಾರಿಗಳ ಶೋಧ
ಶಾಂತಗೌಡ ಬಿರಾದಾರ್ ಮನೆಯಲ್ಲಿ ಎಸಿಬಿ ಅಧಿಕಾರಿಗಳ ಶೋಧ

ಬೆಂಗಳೂರು: ಎಸಿಬಿ ಅಧಿಕಾರಿಗಳ ದಾಳಿ ವೇಳೆ ಅಪಾರ ಪ್ರಮಾಣದ ಅಕ್ರಮ ಆಸ್ತಿ, ಸಂಪತ್ತು ಪತ್ತೆಯಾದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಗದಗದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ ಎಸ್ ರುದ್ರೇಶಪ್ಪ ಅವರ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ.

ನಿನ್ನೆ ಬ್ಯಾಂಕ್ ಗೆ ರುದ್ರೇಶಪ್ಪ ಅವರನ್ನು ಎಸಿಬಿ ಅಧಿಕಾರಿಗಳು ಕರೆದುಕೊಂಡು ಹೋಗಿ ಲಾಕರ್ ತೆಗೆಸಿ ನಗ-ನಾಣ್ಯಗಳ ಶೋಧ ನಡೆಸಿದ್ದರು. ಮೊನ್ನೆ ದಾಳಿ ಸಂದರ್ಭದಲ್ಲಿ ಅವರ ಮನೆಯಲ್ಲಿ ಆದಾಯ ಮೂಲಕ್ಕಿಂತ ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿತ್ತು.

ಇನ್ನು ಎಸಿಬಿ ಅಧಿಕಾರಿಗಳು ಬಂದ ವೇಳೆ ತನಿಖೆಗೆ ಸರಿಯಾಗಿ ಸಹಕರಿಸದ ಮತ್ತು ಪೈಪ್ ನಲ್ಲಿ ನಗದು ಅಡಗಿಸಿಟ್ಟು ಸುದ್ದಿಯಾದ ಕಲಬುರಗಿಯ ಲೋಕೋಪಯೋಗಿ ಇಲಾಖೆಯ ಕಿರಿಯ ಎಂಜಿನಿಯರ್ ಶಾಂತಗೌಡ ಬಿರಾದಾರ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಹೀಗಾಗಿ ಬಿರಾದಾರ್ ಗೆ ಸದ್ಯ ಜೈಲುವಾಸವೇ ಗತಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com