ದಕ್ಷಿಣ ಕನ್ನಡ: ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ; ವೈದ್ಯಾಧಿಕಾರಿ ರತ್ನಾಕರ ಅಮಾನತು

ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ವೈದ್ಯಾಧಿಕಾರಿ ಡಾ.ರತ್ನಾಕರ ಎಂಬುವವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಮಾನತು ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ವೈದ್ಯಾಧಿಕಾರಿ ಡಾ.ರತ್ನಾಕರ ಎಂಬುವವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಮಾನತು ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ.ರತ್ನಾಕರ್ ಅವರು ಕಚೇರಿಯಲ್ಲಿ ಕೆಲಸ ಮಾಡುವ ಕೆಲವು ಮಹಿಳಾ ಗುತ್ತಿಗೆ ನೌಕರರಿಗೆ ಕಚೇರಿಯಲ್ಲಿ ಕಿರುಕುಳದ ಆರೋಪದ ಮೇಲೆ ಅವರನ್ನು ಅಮಾನತುಗೊಳಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನವೆಂಬರ್ 8 ರಂದೇ ರತ್ನಾಕರ ಅವರನ್ನು ಅಮಾನತುಗೊಳಿಸಿ ಆದೇಶ ನೀಡಿದ್ದರೂ, ಈ ಸುದ್ದಿ ಶುಕ್ರವಾರ ಆರೋಪಿ ವೈದ್ಯ ರತ್ನಾಕರ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ದೃಶ್ಯಗಳು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ತಡವಾಗಿ  ಬೆಳಕಿಗೆ ಬಂದಿದೆ.

ಜಿಲ್ಲಾ ಕುಷ್ಠರೋಗ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 3-4 ಗುತ್ತಿಗೆ ಸಿಬ್ಬಂದಿ ಡಾ.ರತ್ನಾಕರ್ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರಿಗೆ ದೂರು ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಅಧಿಕಾರಿ (ಡಿಎಚ್‌ಒ) ಡಾ ಅಶೋಕ್ ಕುಮಾರ್ ತಿಳಿಸಿದ್ದಾರೆ. ಅದರ ಆಧಾರದ ಮೇಲೆ ತಾಲೂಕು ಕುಟುಂಬ ಕಲ್ಯಾಣಾಧಿಕಾರಿ ಡಾ.ದೀಪಾ ಪ್ರಭು ನೇತೃತ್ವದಲ್ಲಿ ತನಿಖೆಗೆ ಡಿಸಿ ಆದೇಶಿಸಿದ್ದರು. ತನಿಖೆಯ ವರದಿಯನ್ನು ಡಿಸಿಗೆ ಸಲ್ಲಿಸಲಾಗಿದ್ದು, ಅವರು ಅದನ್ನು ಸರ್ಕಾರಕ್ಕೆ ರವಾನಿಸಿದ್ದರಿಂದ ಡಾ ರತ್ನಾಕರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಲಾಗಿದೆ.

ವೈರಲ್ ಆಗಿರುವ ವೀಡಿಯೊಗಳು ಮತ್ತು ಚಿತ್ರಗಳಲ್ಲಿ, ಡಾ ರತ್ನಾಕರ್ ಅವರು ಇತರೆ ಸಿಬ್ಬಂದಿಗಳ ಮುಂದೆಯೇ ಕಚೇರಿಯ ಕನಿಷ್ಠ ಐವರು ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಈ ಘಟನೆಗಳನ್ನು ಕೆಲ ಸಿಬ್ಬಂದಿಗಳು ತಮ್ಮ ಸೆಲ್ ಫೋನ್‌ಗಳಲ್ಲಿ ರೆಕಾರ್ಡ್ ಮಾಡಿಕೊಂಡಿದ್ದು ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿದೆ. ಇದೀಗ ಈ ವಿಡಿಯೋಗಳು ಮತ್ತು ಫೋಟೋಗಳು ವೈರಲ್ ಆಗಿವೆ.   

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com